Thursday, March 12, 2026
Flats for sale
Homeಕ್ರೈಂಮಂಗಳೂರು: ವಿವಾಹದ ನೆಪದಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಬಂಧ - ವ್ಯಕ್ತಿ ಬಂಧನ.

ಮಂಗಳೂರು: ವಿವಾಹದ ನೆಪದಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಬಂಧ – ವ್ಯಕ್ತಿ ಬಂಧನ.

ಮಂಗಳೂರು ವಿವಾಹದ ನೆಪದಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪದ ಮೇಲೆ ಕಡಬ ನಿವಾಸಿ ಯುವಕನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅನೀಶ್ ರೆಹಮಾನ್ ಎಂದು ಗುರುತಿಸಲಾಗಿದೆ.

ಅನೀಶ್ ರೆಹಮಾನ್ ತನ್ನನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕಿಸಿ ಇಬ್ಬರೂ ಪ್ರೀತಿಸುತ್ತಿದ್ದರು ಎಂದು ಆರೋಪಿಸಿ 24 ವರ್ಷದ ಸಂತ್ರಸ್ತ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜೂನ್ 26 ರಂದು ಲಿಖಿತ ದೂರು ದಾಖಲಿಸಿದ್ದರು. ಆರೋಪಿಯು ತನ್ನೊಂದಿಗೆ ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ನಂತರ ಸಂತ್ರಸ್ತೆ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ತಿಳಿದು ಮನೆಗೆ ವಿಷಯ ತಿಳಿಸಿದ್ದಾಳೆ.

ಜೂನ್ 26 ರಂದು ಅನೀಶ್ ರೆಹಮಾನ್ ಅವರನ್ನು ಪೊಲೀಸರು ಬಂಧಿಸಿ, ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಆರೋಪಿಯು ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ.
RELATED ARTICLES

LEAVE A REPLY

Please enter your comment!
Please enter your name here

Most Popular