ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಾಜೆ ಸಮೀಪದ ಬಾಕಿಲ ಎಂಬಲ್ಲಿ ದಂಪತಿ ಇಬ್ಬರು ಶನಿವಾರ ಸಂಜೆ ಆತ್ಮಹತ್ಯೆಗೆ ಯತಿಸಿದ್ದು ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಪತಿ ಸಾವನ್ನಪ್ಪಿದ್ದಎಂಬ ಘಟನೆ ನಡೆದಿದೆ. ಅನಂತಾಡಿ ಬಾಕಿಲ ನಿವಾಸಿಗಳಾದ ಬಸ್ ಚಾಲಕ ಪ್ರತಾಪ್ ಮತ್ತು ಆತನ ಪತ್ನಿ ವೀಣಾ ಎಂಬುವರೇ ಪ್ರಾಣ ಕಳೆದುಕೊಳ್ಳಲು ಯತ್ನಿಸಿದವರು. ಚಿಕಿತ್ಸೆ ಫಲಕಾರಿಯಾಗದೆ ಪ್ರತಾಪ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಹೆಜ್ಜೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ದಂಪತಿಗೆ ಐದು ವರ್ಷದ ಅವಳಿ ಮಕ್ಕಳಿದ್ದಾರೆ. ಪೋಷಕರು ತಮ್ಮ ಜೀವನವನ್ನು ಅಂತ್ಯಗೊಳಿಸಲು ಪ್ರಯತ್ನಿಸುತ್ತಿರುವುದನ್ನು ಮಕ್ಕಳು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅಕ್ಕಪಕ್ಕದವರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ವೀಣಾ ಅವರನ್ನು ಮಂಗಳೂರಿಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣೆ ಇನ್ಸ್‌ಪೆಕ್ಟರ್ ನಾಗರಾಜ್ ಭೇಟಿ ನೀಡಿದ್ದಾರೆ. ತನಿಖೆ ನಡೆಯುತ್ತಿದೆ.


