ಉಳ್ಳಾಲ : ಕಾರೊಂದು ರಸ್ತೆ ಬದಿ ಮಲಗಿದ್ದ ಮೂರು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ಬಳಿ ಭಾನುವಾರ ಮುಂಜಾನೆ ನಡೆದಿದೆ.

ಘಟನೆಯಲ್ಲಿ ಮೂರು ಜಾನುವಾರುಗಳು ಸಾವನ್ನಪ್ಪಿದ್ದು, ಕಾರು ಚಾಲಕ ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡಿದ್ದಾರೆ. ಇವರು ಭಾನುವಾರ ಬೆಳಗಿನ ಜಾವ 3:30ರ ಸುಮಾರಿಗೆ ದೇರಳಕಟ್ಟೆಯಿಂದ ತೊಕ್ಕೊಟ್ಟಿಗೆ ತೆರಳುತ್ತಿದ್ದ ವೇಳೆ ಕಾರು ದನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ವೈದ್ಯಕೀಯ ವಿದ್ಯಾರ್ಥಿಯ ಕೈಯ ಮೂಳೆ ಮುರಿತವಾಗಿದೆ. ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.