ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ .
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದ್ದು , ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು,ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.
ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.