ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಜುಲೈ 11, ಮಂಗಳವಾರ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಮರಳು ತುಂಬಿದ ಲಾರಿಯೊಂದು ಎರಡು ಬಸ್‌ಗಳು ಸೇರಿದಂತೆ ಐದು ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಗಂಭೀರ ಗಾಯಗೊಂಡಿದ್ದು ,ಗಾಯಗೊಂಡ ಮಹಿಳೆಯನ್ನು ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಇದೀಗ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.