ಬೆಳ್ತಂಗಡಿ : ಪುಂಜಾಲಕಟ್ಟೆಯ 31 ವರ್ಷದ ವ್ಯಕ್ತಿಯೊಬ್ಬರು ಜುಲೈ 13 ರಂದು ಸೈನೈಡ್ ಸೇವಿಸಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಗಣೇಶ್ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ (31) ಮೃತ ವ್ಯಕ್ತಿ. ವೃತ್ತಿಯಲ್ಲಿ ಅಕ್ಕಸಾಲಿಗನಾಗಿದ್ದ ರೂಪೇಶ್ ಮದ್ಯವ್ಯಸನಿಯಾಗಿದ್ದ ಎನ್ನಲಾಗಿದೆ. ಇತ್ತೀಚೆಗಷ್ಟೇ ಅವರು ಕೆಲಸ ಬಿಟ್ಟಿದ್ದರು ಎಂದು ತಿಳಿದುಬಂದಿದೆ. ಮೃತ ವ್ಯಕ್ತಿ ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.


