Thursday, March 12, 2026
Flats for sale
Homeಕ್ರೈಂಉಡುಪಿ: ನರ್ಸಿಂಗ್ ಹೋಂ ಸೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಪ್ರಕರಣ : ಮೂವರು ವಿದ್ಯಾರ್ಥಿಗಳು ಕಾಲೇಜು ಆಡಳಿತ...

ಉಡುಪಿ: ನರ್ಸಿಂಗ್ ಹೋಂ ಸೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಪ್ರಕರಣ : ಮೂವರು ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್ ಐಆರ್ ದಾಖಲು.

ಉಡುಪಿ : ಉಡುಪಿಯ ನೇತ್ರ ಜ್ಯೋತಿ ಅಲೈಡ್‌ ಹೆಲ್ತ್‌ ಸೈನ್ಸಸ್‌ನ ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿಯೊಬ್ಬ ಹಿಡನ್‌ ಕ್ಯಾಮೆರಾ ಇಟ್ಟು ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿದಂತೆ ಜುಲೈ 26, ಬುಧವಾರ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ ಬಿ ಅವರು ನೀಡಿದ ದೂರಿನಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಐಪಿಸಿ ಕಲಂ 509, 204, 175, 34 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66€ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ನಂತರ ಅದನ್ನು ಡಿಲೀಟ್ ಮಾಡಿದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅವರು ಸಂತ್ರಸ್ತೆಯ ಪ್ರತಿಷ್ಠೆಯನ್ನು ಹಾಳು ಮಾಡುವ ಘಟನೆಗೆ ಸಂಬಂಧಿಸಿದ ವಿವರಗಳು ಮತ್ತು ಸಾಕ್ಷ್ಯಗಳನ್ನು ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

“ಘಟನೆಯ ಮಾರ್ಫ್ ಮಾಡಿದ ವೀಡಿಯೊವನ್ನು ಒನ್ ಇಂಡಿಯಾ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಕಲು ಸಿಂಗ್ ಚವ್ಹಾಣ್ ಎಂಬ ವ್ಯಕ್ತಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದಾರೆ. ಕೋಮು ದ್ವೇಷ ಉಂಟು ಮಾಡಿದ ಹಾಗೂ ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಾಲೇಜಿನ ವಾಶ್‌ರೂಮ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಿರುವುದನ್ನು ಸ್ಮರಿಸಬಹುದಾಗಿದೆ.

ಈ ವಿಚಾರ ಈಗಾಗಲೇ ರಾಜ್ಯದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಹಿಂದೂ ಯುವತಿಯರನ್ನು ಚಿತ್ರೀಕರಿಸಿದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಜುಲೈ 27ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular