ಮುಲ್ಕಿ: ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಪಡುಪಣಂಬೂರು ಗ್ರಾಮ ಪಂಚಾಯತ್ ಗೆ ಮುಂದಿನ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಕುಸುಮಾ ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ಹೇಮನಾಥ ಅಮಿನ್ ತೋಕೂರು ಆಯ್ಕೆಯಾಗಿದ್ದಾರೆ.
ಪಂಚಾಯಿತಿ ಸಭಾಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿ ಲೋಕೇಶ್, ಹಾಗೂ ಪ್ರಭಾರ ತಾಲೂಕು ಪಂಚಾಯತ್ ನಿರ್ವಹಣಾಧಿಕಾರಿ ಹರಿಶ್ಚಂದ್ರ ನೆರವೇರಿಸಿಕೊಟ್ಟರು.
ಬಿಜೆಪಿ ಬೆಂಬಲಿತ ಪಡುಪಣಂಬೂರು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ವಾರ್ಡ್ ಗಳಿದ್ದು ಕಳೆದ ಚುನಾವಣೆಯಲ್ಲಿ 15 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಒಂದು ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದಾರೆ.
ಬಿಗಿ ಭದ್ರತೆಯಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಬಾರಿ ಸರಕಾರದ ನಿಯಮದಂತೆ ಅಧ್ಯಕ್ಷರು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷರು ಸಾಮಾನ್ಯ ಬಂದಿದ್ದು ಕೆಲವು ಸದಸ್ಯರು ಆಕಾಂಕ್ಷಿಗಳಾಗಿದ್ದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಗೌತಮ್ ಜೈನ್ ಮುಲ್ಕಿ ಅರಮನೆ, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ನ ಪಂ ಮಾಜೀ ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯ ಶೈಲೇಶ್, ಬಿಜೆಪಿ ನಾಯಕರಾದ ಅಭಿಲಾಷ್ ಶೆಟ್ಟಿ ಕಟೀಲು, ದಿನೇಶ್ ಪುತ್ರನ್ ಪುರುಷೋತ್ತಮ್ ಬಡಗಿತ್ಲು, ಪಂಚಾಯತ್ ಮಾಜೀ ಅಧ್ಯಕ್ಷರುಗಳಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ಮೋಹನ್ ದಾಸ್, ಸದಸ್ಯರಾದ ಉಮೇಶ್ ಪೂಜಾರಿ,ದಿನೇಶ್ ಹೊಸಲಕ್ಕೆ, ಹರಿಪ್ರಸಾದ್ , ಕೃಷ್ಣ ಶೆಟ್ಟಿಗಾರ್ ಕಲ್ಲಾಪು, ವಿನೋದ್ ತೋಕೂರು, ದಿನೇಶ್ ಸುವರ್ಣ ಬೆಳ್ಳಾಯರು ಹಾಗೂ ಪಂಚಾಯತ್ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.