Thursday, March 12, 2026
Flats for sale
Homeಕ್ರೈಂಮಂಗಳೂರು : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ- ಸವಾರ ಗಂಭೀರ, ಹಿಂಬದಿ ಸವಾರ ಸಾವು.

ಮಂಗಳೂರು : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ- ಸವಾರ ಗಂಭೀರ, ಹಿಂಬದಿ ಸವಾರ ಸಾವು.

ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆ ಬಳಿ ಶನಿವಾರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮಗನಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಅಳೇಕಲ್ ನ ಅಬ್ಬಾಸ್ (58) ಮೃತ ವ್ಯಕ್ತಿ. ಅಬ್ಬಾಸ್ ತನ್ನ ಮಗನೊಂದಿಗೆ ದೇರ್ಲಕಟ್ಟೆ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅಬ್ಬಾಸ್ ಮೃತಪಟ್ಟಿದ್ದಾರೆ. ನೌಶಾದ್ ದೇರ್ಲಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular