Thursday, March 12, 2026
Flats for sale
Homeಕ್ರೈಂಬೆಂಗಳೂರು : ಕರಾಳ ಶನಿವಾರ : ಒಂದೇ ದಿನ ರಾಜ್ಯದಲ್ಲಿ 37 ಜನರು ಅಪಘಾತದಿಂದ ಸಾವು..!

ಬೆಂಗಳೂರು : ಕರಾಳ ಶನಿವಾರ : ಒಂದೇ ದಿನ ರಾಜ್ಯದಲ್ಲಿ 37 ಜನರು ಅಪಘಾತದಿಂದ ಸಾವು..!

ಬೆಂಗಳೂರು :  ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಅಪಘಾತಗಳಲ್ಲಿ ಬೈಕ್ ಸವರಾರೇ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ. ರಾಜ್ಯ ಹೆದ್ದಾರಿ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಆ್ಯಕ್ಸಿಡೆಂಟ್ ಕೇಸ್‍ಗಳು ಹೆಚ್ಚಾಗುತ್ತಿವೆ. ಎಂಬುದಾಗಿ ಟ್ವೀಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಅಪಘಾತಗಳ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಅಲೋಕ್ ಕುಮಾರ್ ಪ್ರಯಾಣಿಕರಿಗೆ ಕೆಲವೊಂದು ಸಲಹೆ ನೀಡಿದ್ದಾರೆ, ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ.

ಬೈಕ್‌ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್‌ ಧರಿಸಿ ಸಂಚರಿಸಬೇಕು. ಅನನುಭವಿ ಚಾಲಕರು ರಾತ್ರಿ ಚಾಲನೆಯನ್ನು ತಪ್ಪಿಸಬೇಕು ಎಂದು ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆಸಾರ್ವಜನಿಕರಿಗೆ ಮನವಿ ಮಾಡಿಕೊಂಡಿರುವ ಎಡಿಜಿಪಿ ಅಲೋಕ್‌ಕುಮಾರ್ , ಅನುಭವ ಇಲ್ಲದವರು ನೈಟ್ ಟ್ರಾವೆಲ್ ಅವೈಡ್ ಮಾಡಿ. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡಿದ್ದಾರೆ.   

RELATED ARTICLES

LEAVE A REPLY

Please enter your comment!
Please enter your name here

Most Popular