Saturday, March 14, 2026
Flats for sale
Homeರಾಜ್ಯಗಂಗಾವತಿ: ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸವಿದ ಶಾಸಕ ರೆಡ್ಡಿ.

ಗಂಗಾವತಿ: ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸವಿದ ಶಾಸಕ ರೆಡ್ಡಿ.

ಗಂಗಾವತಿ: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಪಾಲಕರಿಂದ ಆಕ್ಷೇಪ ಕೇಳಿ ಬಂದ ಹಿನ್ನೆಲೆ, ಶಾಸಕ ಜಿ. ಜನಾರ್ದನರೆಡ್ಡಿ ಸಕರ್ಾರಿ ಶಾಲೆಯಲ್ಲಿ ಬಿಸಿಯೂಟ ಮಾಡಿ ಗುಣಮಟ್ಟ ಪರೀಕ್ಷೆ ಮಾಡಿದರು.

ಇಲ್ಲಿನ ಇಸ್ಲಾಂಪುರದ ಶ್ರಮಿಕರ (ಹಮಾಲರ) ಕಾಲೋನಿಯಲ್ಲಿರುವ ಸಕರ್ಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 9 ಮತ್ತು 10ನೇ ವರ್ಗದ ಮಕ್ಕಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಜನಾರ್ದನರೆಡ್ಡಿ ಚಾಲನೆ ನೀಡಿದರು.

ಬಳಿಕ ಮಾತನಾಡಿ ಇದುವರೆಗೂ ಕೇವಲ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮಾತ್ರ ಮೊಟ್ಟೆ ವಿತರಿಸಲು ಅವಕಾಶವಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದಲ್ಲಿನ ಸಕರ್ಾರ ಇದೀಗ ಮೊಟ್ಟೆ ವಿತರಣೆಯನ್ನು ಹತ್ತನೇ ತರಗತಿವರೆಗೂ ವಿಸ್ತರಿಸಿದೆ.

ಇದರಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಕೊರತೆ ದೂರವಾಗಿ ಮಕ್ಕಳಲ್ಲಿ ಆರೋಗ್ಯ ವೃದ್ಧಿಯಾಗಲಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚೆಕ್ಕಿ ನೀಡುವ ಯೋಜನೆ ಸಕರ್ಾರ ರೂಪಿಸಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬಳಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ತಮ್ಮ ಬೆಂಬಲಿಗರೊಂದಿಗೆ ಅದೇ ಸಕರ್ಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸವಿದ ರೆಡ್ಡಿ, ಊಟದ ಗುಣಮಟ್ಟ ಪರೀಕ್ಷಿಸಿದರು. ಮಕ್ಕಳಿಗೆ ನೀಡುವ ಊದ ಬಗ್ಗೆ ಕೆಲ ಪಾಲಕರಿಂದ ಆಕ್ಷೇಪ ಕೇಳಿ ಬಂದಿವೆ.

ಮಕ್ಕಳಿಗೆ ನೀಡುವ ಊಟದ ಗುಣಮಟ್ಟದಲ್ಲಿ ರುಚಿಯಲ್ಲಿ ಕೊರತೆಯಾಗಬಾರದು. ಮುಖ್ಯವಾಗಿ ಅಡುಗೆ ಮಾಡುವ ಸ್ಥಳ, ಅಡುಗೆ ಸಿಬ್ಬಂದಿ ಸದಾ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶಾಲೆಯ ಮುಖ್ಯಶಿಕ್ಷಕರು ಈ ಬಗ್ಗೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular