ಸುಳ್ಯ : ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಂಪಾಜೆ ವಿ.ಎ. ಸುಳ್ಯ : ಜಮೀನಿಗೆ ಸಂಬಂಧಿಸಿದ ಕಡತವನ್ನು ತೆರವುಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಸಂಪಾಜೆ-ಅರಂತೋಡು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ. ಅರಂತೋಡು ಮೂಲದ ವ್ಯಕ್ತಿಯೊಬ್ಬರು ಆಸ್ತಿಗೆ ಸಂಬಂಧಿಸಿದ ಹಕ್ಕುಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಲಂಚ ಕೇಳುತ್ತಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಗ್ರಾಮ ಲೆಕ್ಕಿಗನನ್ನು ಬಲೆಗೆ ಕೆಡವಿದ್ದಾರೆ.


