ಮಂಗಳೂರು : ಲಾಲ್‌ಬಾಗ್‌ನ ಸಾಯಿಬೀನ್ ಕಾಂಪ್ಲೆಕ್ಸ್‌ನಲ್ಲಿರುವ ಮೂರು ಅಂಗಡಿಗಳಲ್ಲಿ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬರ್ಕೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಪೊಲೀಸರು ಮೂರು ಅಂಗಡಿಗಳ ಮೇಲೆ ದಾಳಿ ನಡೆಸಿ 2.7 ಲಕ್ಷ ಮೌಲ್ಯದ ಇ-ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಸುಳ್ಯದ ನಿವಾಸಿ ಸ್ವಾತಿ (26), ಮಣ್ಣಗುಡ್ಡದ ಶಿವಕುಮಾರ್ (34), ಕುತ್ತಾರ್ ಪಡವ್‌ನ ಹಸನ್ ಶರೀಫ್ ಮತ್ತು ಜೆಪ್ಪುವಿನ ರಹಮತುಲ್ಲಾ ಎಂದು ಗುರುತಿಸಲಾಗಿದೆ. ಅವರ ವಿರುದ್ಧ ಇ-ಸಿಗರೇಟ್ ನಿಷೇಧ ಕಾನೂನು ಮತ್ತು COTPA ನಿಯಮಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಬಂಧಿತರ ಪೈಕಿ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದಕ್ಕೂ ಮುನ್ನ ಮಾರ್ಚ್ 30 ರಂದು ಇದೇ ಅಂಗಡಿಗಳ ಮೇಲೆ ದಾಳಿ ನಡೆಸಿ 6.8 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ವಶಪಡಿಸಿಕೊಳ್ಳಲಾಗಿತ್ತು.


