ಕಾಸರಗೋಡು : ಕಂಬಾರ ಸಿರಿಬಾಗಿಲು ಎಂಬಲ್ಲಿ ಗುರುವಾರ ಮಧ್ಯಾಹ್ನ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಶಾಲಾ ಬಸ್‌ನಡಿಗೆ ಸಿಲುಕಿ ನಾಲ್ಕು ವರ್ಷದ ಶಾಲಾ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಸಿರಿಬಾಗಿಲು ನಿವಾಸಿ ಮಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೇಯಾ (4) ಮೃತ ದುರ್ದೈವಿ. ಬಾಲಕಿಯ ಮನೆಯ ಸಮೀಪವೇ ಈ ದುರ್ಘಟನೆ ನಡೆದಿದೆ. ಶಾಲಾ ಬಸ್ ಆಯಿಷಾಳನ್ನು ಆಕೆಯ ಮನೆ ಬಳಿ ಇಳಿಸಿ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಆಕಸ್ಮಿಕವಾಗಿ ಬಸ್ಸಿನ ಕೆಳಗೆ ಬಿದ್ದಿದ್ದಾಳೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಆಕೆ ಕೊನೆಯುಸಿರೆಳೆದಿದ್ದಳು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


