Saturday, July 25, 2026
Homeರಾಜ್ಯಸುರಪುರ : ಕಲುಷಿತ ನೀರು ಆಹಾರ ಸೇವಿಸಿ 34 ಜನ ಅಸ್ವಸ್ಥ ಚಿಕ್ಕನಹಳ್ಳಿ ಗ್ರಾಮಕ್ಕೆ ಜಿಲ್ಲಾ...

ಸುರಪುರ : ಕಲುಷಿತ ನೀರು ಆಹಾರ ಸೇವಿಸಿ 34 ಜನ ಅಸ್ವಸ್ಥ ಚಿಕ್ಕನಹಳ್ಳಿ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಭೇಟಿ.

ಸುರಪುರ: ಕಲುಷಿತ ನೀರು ಸೇವನೆ ವಿಷಪೂರಿತ ಆಹಾರ ಸೇವಿಸಿ 34 ಜನ ಅಸ್ವಸ್ಥ ಗೊಂಡಿರುವ ಚಿಕ್ಕನಹಳ್ಳಿ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರೀಮಾ ಪನ್ವಾರ್ ಭೇಟಿ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ತಾಲೂಕಿನಲ್ಲಿ ಆತಂಕ ಮೂಡಿಸಿರುವ ಚಿಕ್ಕನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 24 ಮಕ್ಕಳು ಅಸ್ವಸ್ಥ ಗೊಂಡರೆ ವಿಷಪೂರಿತ ಆಹಾರ ಸೇವಿಸಿ 9 ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗ್ರಾಮದಲ್ಲಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಕೆಲ ಮಕ್ಕಳಿಗೆ ಹಾಗೂ ವಿಷಪೂರಿತ ಆಹಾರ ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿರುವವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ ನೀಡಿ ಗ್ರಾಮದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ ಆರ್ ವಿ ನಾಯಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ಇತರೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular