ಸುಳ್ಯ : ಆ.31ರಂದು ಗುರುವಾರ ಬೆಳಗ್ಗೆ ಸುಳ್ಯದ ಅಡ್ಕಾರ್ ಎಂಬಲ್ಲಿ ರಸ್ತೆ ಬದಿ ನಿಂತಿದ್ದಾಗ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾವೇರಿಯ ರಾಣೆಬೆನ್ನೂರಿನ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತರು. ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕರನ್ನು ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಮತ್ತೊಬ್ಬ ಕಾರ್ಮಿಕ ವೆಂಕಪ್ಪ ಗಂಭೀರ ಗಾಯಗೊಂಡಿದ್ದು ಎಂಬುವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


