Saturday, July 25, 2026
Homeರಾಜ್ಯರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ಮುನ್ನವೇ ಶಿಕ್ಷಕನನ್ನು ಬೇಡಾ ಎಂದ ಪೋಷಕರು...

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ಮುನ್ನವೇ ಶಿಕ್ಷಕನನ್ನು ಬೇಡಾ ಎಂದ ಪೋಷಕರು ಬೀಗ ಹಾಕಿ ಪ್ರತಿಭಟನೆ ನಡೆಸಿದ ಪೋಷಕರು ಹಾಗೂ ವಿದ್ಯಾರ್ಥಿಗಳು.

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ಮುನ್ನವೇ ಶಿಕ್ಷಕನು ಬೇಡ ಎಂದು ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಟೂ ರು ಗ್ರಾಮದಲ್ಲಿ ನಡೆದಿದೆ.

ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದರ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಏಕಾಏಕಿ ವರ್ಗಾವಣೆ ಮಾಡಿದ್ದರು.

ಅಮಾನತ್ತು ಮಾಡಲಾದ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಇವರನ್ನು ಏಕಾಏಕಿ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ವರ್ಗಾಯಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಪೋಷಕವರ್ಗ ವಿದ್ಯಾರ್ಥಿವೃಂದ ಇಂದು ಶಾಲೆಯ ಮುಂಭಾಗದಲ್ಲಿ ದಿಡೀರ್ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರ ಸ್ವೀಕರಿಸದಂತೆ ತಡೆ ನೀಡಿ ನಮ್ಮೂರಿಗೆ ಈ ಮುಖ್ಯೋಪಾದ್ಯಾಯರು ಬೇಡವೇ ಬೇಡಾ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಸಾರ್ವಜನಿಕ ಉಪನಿರ್ದೇಶಕರು ಬರುವವರೆಗೂ ನಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಸ್.ಡಿ.ಎಂ.ಸಿ.ಆಧ್ಯಕ್ಷ ಸೀತರಾಮ್, ರಿಪ್ಪನ್ ಪೇಟೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸದಸ್ಯರಾದ ಜಿ.ಡಿ.ಮಲ್ಲಿಕಾರ್ಜುನ,ಗಣಪತಿ ಗವಟೂರು ಎಸ್.ಡಿ.ಎಂ.ಸಿ.ಸದಸ್ಯರುಗಳು, ವಿದ್ಯಾರ್ಥಿಗಳ ಪೋಷಕರು,ಗ್ರಾಮಸ್ಥರು ವಿದ್ಯಾರ್ಥಿ ಸಮೂಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಅರ್,ಕೃಷ್ಣಮೂರ್ತಿ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದರೊಂದಿಗೆ ಈ ಶಾಲೆಗೆ ಮುಖ್ಯ ಶಿಕ್ಷಕ ಗಂಗಾನಾಯ್ಕ್ ನೇಮಕಾತಿಯನ್ನು ರದ್ದುಗೊಳಿಸಿ ಅದೇಶಿಸುವ ಬಗ್ಗೆ ಭರವಸೆ ನೀಡಿದರ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರಂತರು ಪ್ರತಿಭಟನೆಯನ್ನು ಹಿಂಪಡೆದರು.

RELATED ARTICLES

LEAVE A REPLY

Please enter your comment!
Please enter your name here

Most Popular