ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋನ ಕನ್ನಡ ಅವತರಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪರ್ಧಿಯಾಗುತ್ತಿರುವ ಬಗ್ಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರಿಗೆ ದೂರು ಸಲ್ಲಿಸಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಸ್ಪೀಕರ್ಗೆ ದೂರು ಸಲ್ಲಿಸಿದೆ.ರಾಜ್ಯವು ಭೀಕರ ಬರಗಾಲದಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ದೂರದರ್ಶನದ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರು. ರಾಜ್ಯ ಸರ್ಕಾರದಿಂದ ಸಂಬಳ ಪಡೆಯುತ್ತಿದ್ದು, ಯಾವುದೇ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ. ತಮ್ಮ ಜವಾಬ್ದಾರಿ ಅರಿತು ಮನರಂಜನಾ ರಿಯಾಲಿಟಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ವೇತನ ಮತ್ತು ಭತ್ಯೆಗಳನ್ನು ತಡೆಹಿಡಿಯಬೇಕು ಕೂಡಲೇ ಅವರನ್ನು ವಜಾಗೊಳಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ