Sunday, July 26, 2026
Homeರಾಜ್ಯಶಿರಾ : ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಬೆಸ್ಕಾಂ ಕಚೇರಿ ಮುಂದೆ ಧರಣಿ.

ಶಿರಾ : ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಬೆಸ್ಕಾಂ ಕಚೇರಿ ಮುಂದೆ ಧರಣಿ.

ಶಿರಾ : ರೈತರ ಪಂಪ್ ಸೆಟ್‌ಗಳಿಗೆ ಹಾಗೂ ತೊಟದ ಮನೆ ವಾಸಿಗಳಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಾಲ್ಲೂಕಿನ ಬುಕ್ಕ ಪಟ್ಟಣ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ವಿದ್ಯುತ್ ವಿತರಣಾ ಕೇಂದ್ರದ ಎದುರು ನೂರಾರು ಸಂಖ್ಯೆಯಲ್ಲಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟಿಸಿ ಬೆಸ್ಕಾಂ ಸಹಾಯಕ ಕಾರ್ಯಪಾಲಕರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ರೈತರು ಇತ್ತೀಚೆಗೆ ರೈತರಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆ ಮಾಡುವಲ್ಲಿ ಬೆಸ್ಕಾಂ ವಿಫಲವಾಗಿದೆ. ಸಂಜೆ ೬ ಗಂಟೆಯಿಂದ ಬೆಳಿಗ್ಗೆ ೬ ಗಂಟೆ ವರೆಗೆ ಸಿಂಗಲ್ ಫೇಸ್ ಮತ್ತು ೩ ಫೇಸ್ ವಿದ್ಯುತ್ ಪೈರೈಕೆಯಾಗುತ್ತಿತ್ತು ಅದರೆ ಕಳೆದ ೧೫ ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ರಾತ್ರಿ ವೇಳೆ ಕೆಲವೇ ಗಂಟೆಗಳು ಮಾತ್ರ ಪೂರೈಕೆಯಾಗುತ್ತಿರುವುದರಿಂದ ಬಹುತೇಕ ರೈತರು ತಮ್ಮ ಕುಟುಂಬದವರನ್ನು ದೂರ ಮಾಡಿ ಕೊಂಡು ಜಮೀನುಗಳ ಬಳಿಯೇ ವಾಸಿಸುತ್ತಾ ವಿದ್ಯುತ್‌ಗಾಗಿ ನಿದ್ರೆ ಆಹಾರ ಬಿಟ್ಟು ಚಾತಕ ಪಕ್ಷಿಗಳಂತೆ ಕಾಯುವಂತ ದುರಂತ ಉಂಟಾಗಿದೆ ಎಂದು ಅಕ್ರೋಶ ವ್ಯಕ್ತ ಪಡೆಸಿದರು,
ಈ ಹಿಂದೆ ವಿದ್ಯುತ್ ಪೂರೈಕೆ ಮಾಡುತ್ತಿದ್ದ ವ್ಯವಸ್ಥೆಯಂತೆ ಸಂಜೆ ೬ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯವರೆಗೆ ಸಿಂಗಲ್ ಮತ್ತು ೩ ಫೇಸ್ ವಿದ್ಯುತ್ ಪೂರೈಕೆ ಮಾಡ ಬೇಕು, ತೋಟದ ಮನೆ ವಾಸಿಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡ ಬೇಕೆಂದು ಹಾಗೂ ಸದ್ಯ ನೀರು ಸರಬರಾಜು ಆಗದೆ ಬೆಳೆಗಳು ನಾಶವಾಗುತ್ತಿದೆ ಎಂದು ಆರೋಪಿಸಿದರು.

ವಿದ್ಯುತ್ ವಿತರಣಾ ಕೇಂದ್ರದಿಂದ ಸುತ್ತಮುತ್ತಲಿನ ಹಲವಾರು ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿದೆ. ಸಮರ್ಪಕವಾದ ವಿದ್ಯುತ್ ಪೈರೈಕೆಯಾಗದಿದ್ದರೆ ಕೋಟ್ಯಾಂತರ ರೂಪಾಯಿ ಬೆಳೆಗಳು ನಾಶವಾಗಲಿದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಬೆಸ್ಕಾಂ ಅಧಿಕಾರಿಗಳೇ ವಹಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,

RELATED ARTICLES

LEAVE A REPLY

Please enter your comment!
Please enter your name here

Most Popular