ಮಾಗಡಿ : ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರು (62) ಮೃತಪಟ್ಟ ದುದೈವಿಯಾಗಿದ್ದು ಸೋಲೂರು ಸರ್ಕಲ್ ಬಳಿ ರಸ್ತೆ ದಾಟುವ ವೇಳೆ ಈ ದುರ್ಘಟನೆ ನಡೆದಿದೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಗುರುವಾರ ತಟ್ಟೆಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಾಗಡಿ, ಮಂಗಳೂರು ರಸ್ತೆಯ ಸೋಲೂರು ಸರ್ಕಲ್ ನಲ್ಲಿ ಯಾವುದೆ ಸಿಗ್ನಲ್ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ನಡೆದಿದೆ. ಈ ವೃತ್ತದ ಬಳಿ ಮೇಲು ಸೇತುವೆ ನಿರ್ಮಿಸುವಂತೆ ಹಲವಾರು ವರ್ಷಗಳಿಂದ ಸ್ಥಳಿಯರು ಒತ್ತಾಯಿಸುತ್ತಿದ್ದರು ಸ್ಥಳಿಯರ ಮನವಿಗೆ ಸಂಬಂಧಪಟ್ಟವರು ಸ್ಪಂಧಿಸುತ್ತಿಲ್ಲ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ಘಟನೆ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.