Monday, March 16, 2026
Flats for sale
Homeದೇಶಮಂಗಳೂರು : ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರದಲ್ಲಿಯೇ ಆರಂಭ : ನಳಿನ್ ಕುಮಾರ್...

ಮಂಗಳೂರು : ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರದಲ್ಲಿಯೇ ಆರಂಭ : ನಳಿನ್ ಕುಮಾರ್ ಕಟೀಲ್.

ಮಂಗಳೂರು : ”ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಕರಾವಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ವಿಸ್ತರಣೆಯಾಗಬೇಕೆಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

“ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಲು ಸುಸಜ್ಜಿತವಾಗಿದ್ದು, ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ. ಈ ಶುಭ ಸುದ್ದಿಗಾಗಿ ಕೇಂದ್ರ ಸರಕಾರಕ್ಕೆ ಜಿಲ್ಲೆಯ ನಾಗರಿಕರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದರು.

ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವಂತೆ ಒತ್ತಾಯ ಕೇಳಿಬಂದಿದೆ. ಮಂಗಳೂರು-ಮಡ್ಗಾಂವ್ ಮತ್ತು ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಿಸಲು ರೈಲ್ವೆ ಇಲಾಖೆ ಮುಂದೆ ಪ್ರಸ್ತಾವನೆ ಇತ್ತು. ಆದರೆ ಸಂಸದ ನಳಿನ್ ಅವರು ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರದಲ್ಲೇ ಓಡಲಿದೆ. ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ಗಾಗಿ ಕರಾವಳಿಯ ಜನರ ಬೇಡಿಕೆಯೂ ಈಡೇರುವ ಸೂಚನೆಗಳಿವೆ.
RELATED ARTICLES

LEAVE A REPLY

Please enter your comment!
Please enter your name here

Most Popular