Friday, March 13, 2026
Flats for sale
Homeರಾಜ್ಯಶಿರಾ : ಶಾಲಾ ಕಾಲೇಜು ಹೋಗಲು ಬಸ್‌ಗಾಗಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಟನೆ.

ಶಿರಾ : ಶಾಲಾ ಕಾಲೇಜು ಹೋಗಲು ಬಸ್‌ಗಾಗಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಟನೆ.

ಶಿರಾ : ಶಾಲಾ ಕಾಲೇಜು ವೇಳೆಗೆ ಬಸ್ ಸೌಲಭ್ಯ ಬೇಕೆಂದು ಬೇಡಿಕೆ ಮುಂದಿಟ್ಟುಕೊಂಡು ದೊಡ್ಡ ಅಲದಮರ ಗೇಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶಾಲಾ ಸಮಯಕ್ಕೆ ಶಿರಾ ನಗರಕ್ಕೆಬಸ್ ಸೌಲಭ್ಯ ಆಗ್ರಹಿಸಿ ಶಿರಾನಗರಕ್ಕೆ ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ತಾಲೂಕಿನ ದೊಡ್ಡ ಅಲದಮರ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರು.ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಶಾಲಾ-ಕಾಲೇಜು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆಯ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಇಂದು ಬೆಳಿಗ್ಗೆ 8.00 ಗಂಟೆಯಿಂದಲೇ ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಸುಮಾರು 150 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಪೋಷಕರು ಸಾಥ್ ನೀಡಿದರು ಬೆಳಿಗ್ಗೆ 8.00 ಗಂಟೆಯಿಂದ ರಸ್ತೆ ಮೇಲೆ ಕುಳಿತುಕೊಂಡು ಪ್ರತಿಭಟನೆ ನಡೆಸಿ ಬಸ್ ಗಾಗಿ ಆಗ್ರಹಿಸಿ ಆಕ್ರೋಶವನ್ನು ಹೊರ ಹಾಕಿದರು.

ಇದರಿಂದ‌ ಸುಮಾರು ಒಂದುವರೆ ಗಂಟೆಗಳ ಕಾಲ ರಸ್ತೆಯ ಬದಿಗಳಲ್ಲಿಬಸ್ಸುಗಳು ಸಾಲಾಗಿ ನಿಂತಿದ್ದವು. ಈ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ಕಳ್ಳಂಬೆಳ್ಖ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು ಮೊದಲು ಸಮಸ್ಯೆ ಬಗೆಹರಿಯುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಶಿರಾ ಸಾರಿಗೆ ಸಂಸ್ಥೆ ಅಧಿಕಾರಿ ವಿದ್ಯುತ್ ರಾವ್ ಶಾಲಾ, ಕಾಲೇಜು ಸಮಯಕ್ಕೆ ಸೂಕ್ತ ಬಸ್ ನಾಳೆ ಯಿಂದಲೇ ದೊಡ್ಡ ಅಲದಮರ ಗೇಟ್ ನಿಂದಲೇ ವ್ಯವಸ್ಥೆ ಮಾಡುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಅಂತ್ಯಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular