ವಿಜಯಪುರ : ರಾಜ್ಯದ ವಿಜಯಪುರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ 10 ಕ್ಕೂ ಹೆಚ್ಚು ಕಾರ್ಮಿಕರು ನೂರಾರು ಗೋಣಿಚೀಲಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ . ಗೋದಾಮಿನಲ್ಲಿ ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳ ಅಡಿ ಸಿಲುಕಿರುವ 10ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ಅಗ್ನಿಶಾಮಕ, ಪೊಲೀಸ್, ಹೋಮ್‌ಗಾರ್ಡ್ ಸೇರಿ ಸುಮಾರು 100 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದು,ಲ್ಕು ಜೆಸಿಬಿಗಳನ್ನೂ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ.
10 ರಿಂದ 12 ಜನ ಕಾರ್ಮಿಕರು ಅದರೊಳಗೆ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಗೋವಿನ ಜೋಳ ಸಂಗ್ರಹ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.ಮೂರು ಜನ ಹೊರಗಡೆ ಇದ್ದು, ಗಾಯಗಳಾಗಿವೆ. ಅವರಿಗೆ ತೊಂದರೆಯಾಗದಂತೆ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಒಳಗೆ ಸಿಲುಕಿದವರಿಗೆ ಆಕ್ಸಿಜನ್ ಪುರೈಸುವ ಕೆಲಸ ಮಾಡುತ್ತಿದ್ದೇವೆ. ಇನ್ನು ಅರ್ಧ ಗಂಟೆಯಲ್ಲಿ ಆಕ್ಸಿಜನ್ ಪೂರೈಸಲಾಗುವುದು ಎಂದುಜಿಲ್ಲಾಧಿಕಾರಿ ಭೂಬಾಲನ್ ಮಾಹಿತಿ ನೀಡಿದ್ದಾರೆ.
ಉತ್ತರಾಖಂಡದ ಉತ್ತರಕಾಶಿಯಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು 17 ದಿನಗಳ ನಂತರ ರಕ್ಷಿಸಿದ ಕೆಲವೇ ದಿನಗಳಲ್ಲಿ ಈ ಅವಘಡ ನಡೆದಿದೆ.ವಿಜಯಪುರ ನಗರದ ಹೊರವಲಯದ ಅಲಿಯಾಬಾದ್ ಬಳಿಯ ಕೈಕಾರಿಕಾ ಪ್ರದೇಶದಲ್ಲಿರುವ ರಾಜಗುರು ಪುಡ್ಸ್ ಗೋದಾಮಿನಲ್ಲಿ ಸೋಮವಾರ ರಾತ್ರಿ ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಬಿದ್ದಿದೆ. ಪರಿಣಾಮವಾಗಿ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ಮೆಕ್ಕೆಜೋಳದ ಮೂಟೆಗಳ ಅಡಿಯಲ್ಲಿ ಸಿಲುಕಿದ್ದಾರೆ. ಮೆಕ್ಕೆಜೋಳದ ಮೂಟೆಗಳ ಅಡಿಯಲ್ಲಿ ಸಿಲುಕಿದವರೆಲ್ಲ ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇದೇ ಇಂಡಸ್ಟ್ರೀಜ್ನಲ್ಲಿ ಕೆಲಸ ಮಾಡುತ್ತಿದ್ದರು.


