ಬೆಂಗಳೂರು : ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಸಮರ ಸಾರಿರುವ ಬಿಬಿಎಂಪಿ, ಸಿನಿಮಾ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲೀಕತ್ವದ ಟಿ.ದಾಸರಹಳ್ಳಿಯಲ್ಲಿರುವ ಮಾಲ್ ಗೆ ಬೀಗಮುದ್ರೆ ಜಡಿದಿದ್ದಾರೆ.
ಇಂದು ಬೆಳ್ಳಂ ಬೆಳಗ್ಗೆ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಲಯ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಹೆಚ್ಚುವರಿ ಆಯುಕ್ತ ಬಾಲಶೇಖರ್, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳ ತಂಡ ಟಿ.ದಾಸರಹಳ್ಳಿಯಲ್ಲಿರುವ ರಾಕ್ ಲೈನ್ ಮಾಲ್ ಗೆ ಬೀಗ ಹಾಕಿ ವಶಕ್ಕೆ ತೆಗೆದುಕೊಂಡರು.
ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಅಧಿಕಾರಿಯೊಬ್ಬರು, ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಈ ಸಂಬAಧ ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆ ಪಾವತಿಸಿಲ್ಲ ಎಂದು ಹೇಳಿದರು.
ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಬೀಗ ಮುದ್ರೆ ಹಾಕಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ, ಕಳೆದ ಡಿಸೆಂಬರ್‌ನಲ್ಲಿ BBMP 51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಸ್ಕ್ವೇರ್ ಮಾಲ್‌ಗೆ ಬೀಗಮುದ್ರೆ ಹಾಕಿತ್ತು. 2019-20ರ ವರೆಗಿನ ಆಸ್ತಿ ತೆರಿಗೆ ಬಾಕಿಯಿದ್ದ ಹಿನ್ನೆಲೆಯಲ್ಲಿ ಬೀಗ ಹಾಕಲಾಗಿತ್ತು.
ಮಂತ್ರಿ ಮಾಲ್ ಮಾಲೀಕ 2020ರ ಆಗಸ್ಟ್ನಲ್ಲಿ ಬಿಬಿಎಂಪಿ ಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್‌ನ ಆಡಳಿತ ಮಂಡಳಿ ತೆರಿಗೆ ಪಾವತಿಸಿರಲಿಲ್ಲ, ಹೀಗಾಗಿ ಕಳೆದ ವರ್ಷ ಬೀಗಹೀಗೆ, 2023 ರ ನವೆಂಬರ್ 2024ರ ಫೆಬ್ರವರಿ ನಡುವೆ 46319 ಆಸ್ತಿಗಳಿಗೆ ತೆರಿಗೆ ಬಾಕಿ ವಸೂಲಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.
ಬಿಬಿಎಂಪಿ ಕಂದಾಯ ಅಧಿಕಾರಿಗಳು ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ ಪ್ರಕರಣಕ್ಕೆ ಸಂಬಂದಿಸಿದ 7302 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ. ಇನ್ನೂ ನಿನ್ನೆಯೂ ಕಾರುಗಳು ಮತ್ತು ಶಾಲಾ ಬಸ್‌ಗಳಂತಹ ಚರ ಆಸ್ತಿಗಳನ್ನು ಮೊದಲ ಬಾರಿಗೆ ಬಿಬಿಎಂಪಿ ಜಪ್ತಿ ಮಾಡಿತ್ತು. ಬಿಬಿಎಂಪಿಯ ಯಲಹಂಕ ವಿಭಾಗದಲ್ಲಿ ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.


