ಬೆಂಗಳೂರು ; ಮಾನವನ ವರ್ತನೆ ಇತ್ತೀಚಿನ ದಿನಗಳಲ್ಲಿ ಮಿತಿಮೀರಿದ್ದು ಚಿಕ್ಕ ಪುಟ್ಟ ಹೆಣ್ಣು ಮಕ್ಕಳ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. 70 ವರ್ಷದ ವೃದ್ಧನಿಂದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಡುವೆ ಹೆತ್ತವರು ಮಕ್ಕಳನ್ನು ಬಿಟ್ಟು ಹೊಗದಂತಹ ಪರಿಸ್ಥಿತಿ ಉಂಟಾಗಿದೆ.
70 ವರ್ಷದ ಮುದಿಯ ಇನ್ನೇನ್ನು ಪ್ರಪಂಚದಲ್ಲಿ ಬದುಕಿಬಾಳಬೇಕಾದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ,ಕಿರುಚಾಡದಂತೆ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ದುಶ್ಕ್ರುತ್ಯ ಮೆರೆದಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು ಪ್ರಕರಣ ತನಿಖೆ ನಡೆಯುತ್ತಿದೆ.