ಸುಬ್ರಮಣ್ಯ. ; ದ.ಕ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪ.ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿದಿದ್ದಾರೆ.ಯುವಕ ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆಗೈದವರ ಮೇಲೆ ಪೊಲೀಸ್ ದೂರು ನೀಡಿದ್ದಾನೆ.
ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸ್ಥಳಿಯ ಕಾರ್ಯಕರ್ತರು ,ಕುಕ್ಕೆ ಸುಬ್ರಹ್ಮಣ್ಯ ಬಸ್ ಸ್ಟ್ಯಾಂಡ್ ನಲ್ಲಿ ಕಂಡು ಬಂದ ಜೋಡಿಯನ್ನು ವಿಚಾರಿಸಿದ್ದಾರೆ.
ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನ ಬಗ್ಗೆ ಪ್ರಶ್ನಿಸಿ ವಿಚಾರಿಸದ ಮೇಲೆ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
ಹಲ್ಲೆಗೊಳಗಾದ ಯುವಕ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದೆ.
ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ
ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯಿಂದಲೂ ಯುವಕನ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿದ್ದಾರೆ.