ಬೆಂಗಳೂರು : ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 17 ಕ್ಕೆ ಮುಂದೂಡಲಾಗಿದೆ.
ಈ ಅರ್ಜಿ ಮೈಸೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಗುರುವಾರ ವಿಚಾರಣೆಗೆ ಬಂದಿತ್ತು. ಸ್ಯಾಂಟ್ರೋ ರವಿ ಅವರು ಅತ್ಯಾಚಾರ, ಕೌಟುಂಬಿಕ ಹಿಂಸೆ ಮತ್ತು ಅಕ್ರಮ ಹಣ ವರ್ಗಾವಣೆಯಂತಹ ಅನೇಕ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ ಕಾಲಾವಕಾಶ ಕೋರಿದ್ದರಿಂದ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. ರವಿ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿದೆ.


