ಧಾರವಾಡ : ಜಿಲ್ಲೆಯಾ ತೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಗುರುವಾರ ಮುಂಜಾನೆ ಪ್ರಯಾಣಿಸುತ್ತಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 12 ಅಂಗನವಾಡಿ ಕಾರ್ಯಕರ್ತೆಯರು ಗಾಯಗೊಂಡಿದ್ದಾರೆ.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ ಆಯೋಜಿಸಿದ್ದ ‘ಬೆಳಗಾವಿ ಚಲೋ’ದಲ್ಲಿ ಭಾಗವಹಿಸಲು ಸಂತ್ರಸ್ತರು ಬಳ್ಳಾರಿಯಿಂದ ಬೆಳಗಾವಿಗೆ ತೆರಳುತ್ತಿದ್ದರು.
ಗಾಯಾಳುಗಳನ್ನು ಧಾರವಾಡದ ಜಿಲ್ಲಾ ಸಿವಿಲ್ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.