ದಿಸ್ಪುರ್ : ಅಸ್ಸಾಂ ಸರ್ಕಾರವು ಗೋಮಾಂಸ ನಿಷೇಧವನ್ನು ಬಿಗಿಗೊಳಿಸಿದೆ ಮತ್ತು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆ ನಿಷೇಧಿಸಿದೆ. ಅಸ್ಸಾಂ ಸರ್ಕಾರದ ಈ ನಿರ್ಧಾರದ ಬಗ್ಗೆ ಸ್ವತಃ ಸಿಎಂ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.
ಅಸ್ಸಾಂ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಈಗಿರುವ ಕಾನೂನಿಗೆ ತಿದ್ದುಪಡಿ ತಂದು ಹೊಸ ನಿಬಂಧನೆಗಳನ್ನು ಸೇರಿಸಲು ನಿರ್ಧರಿಸಲಾಗಿದೆ.
ಮಸೂದೆಯ ನಿಬಂಧನೆಗಳನ್ನು ಉಲ್ಲಂಘಿಸಿದರೆ 3 ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. 5 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಈ ಹಿಂದೆ ಕೇವಲ ದೇವಸ್ಥಾನಗಳ ಬಳಿ ಗೋಮಾಂಸ ತಿನ್ನುವುದನ್ನು ನಿಷೇಧಿಸಲಾಗಿದೆ, ಆದರೆ ಈಗ ಅದನ್ನು ಇಡೀ ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದಿದ್ದಾರೆ .
ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021 ರಲ್ಲಿ ಗೋಮಾಂಸವನ್ನು ನಿಷೇಧಿಸಲಾಗಿದೆ. ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಾಲಯ ಅಥವಾ ಸತ್ರ (ವೈಷ್ಣವ ಮಠ) ದ ಐದು ಕಿಲೋಮೀಟರ್‌ಗಳ ಒಳಗೆ, ದನಗಳ ಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಶಾಸಕ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಡಾ.ಹಫೀಜ್ ರಫೀಕುಲ್ ಇಸ್ಲಾಂ ಅವರು ಜನರು ಏನು ತಿನ್ನುತ್ತಾರೆ ಅಥವಾ ಧರಿಸುತ್ತಾರೆ ಎಂಬುದನ್ನು ಕ್ಯಾಬಿನೆಟ್ ನಿರ್ಧರಿಸಬಾರದು ಎಂದು ಹೇಳಿದ್ದಾರೆ.
ಬಿಜೆಪಿಯವರು ಗೋವಾದಲ್ಲಿ ಗೋಮಾಂಸವನ್ನು ನಿಷೇಧಿಸಲು ಸಾಧ್ಯವಿಲ್ಲ, ಅವರು ಈಶಾನ್ಯ ರಾಜ್ಯಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಸಾಧ್ಯವಿಲ್ಲ,ಹಾಗಾದರೆ ಅಸ್ಸಾಂನಲ್ಲಿ ಏಕೆ ಈ ನಿಷೇಧ ಈ ನಿರ್ಧಾರಕ್ಕೆ ನಾವು ಹೆಚ್ಚು ಗಮನ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.