ಬಳ್ಳಾರಿ : ಸೋಮವಾರ ಮುಂಜಾನೆ ಬಳ್ಳಾರಿ ಜಿಲ್ಲೆಯ ಹಲಕುಂದಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಂಪ್ಲಿ ತಾಲೂಕಿನ ಎಮ್ಮಿಗನೂರಿನ ಮುನ್ಸಿಪಲ್ ಪಿಯು ಕಾಲೇಜಿನ ವಿದ್ಯಾರ್ಥಿ ಕನಕರಾಜು (19), ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮರಡಿಯ ವಾರ್ಡ್‌ಲಾ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಶಂಕರ್ (18) ಮತ್ತು ಪದವಿಪೂರ್ವ ವಿದ್ಯಾರ್ಥಿ ಹೊನ್ನೂರು (22) ಮೃತಪಟ್ಟವರು. …
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗೆ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.