Thursday, December 12, 2024
Flats for sale
Homeರಾಜ್ಯಬೆಂಗಳೂರು : ಲೋಕಾಯುಕ್ತ ಬಲೆಗೆ ಬಿದ್ದ 10 ಭ್ರಷ್ಟ ಅಧಿಕಾರಿಗಳು,ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆ..!

ಬೆಂಗಳೂರು : ಲೋಕಾಯುಕ್ತ ಬಲೆಗೆ ಬಿದ್ದ 10 ಭ್ರಷ್ಟ ಅಧಿಕಾರಿಗಳು,ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆ..!

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಿನ್ನಲೆಯಲ್ಲಿ 10 ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿರುವ ಲೋಕಾಯುಕ್ತರು ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿಯನ್ನು ಪತ್ತೆಹಚ್ಚಿದ್ದಾರೆ.ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ 10 ಮಂದಿ ಭ್ರಷ್ಟ ಅಧಿಕಾರಿಗಳ ಮನೆ ಇತರೆಡೆ ಲೋಕಾಯುಕ್ತ ಪೊಲೀಸರುಇಂದು ಮುಂಜಾನೆಯಿAದಲೇ ದಾಳಿ ನಡೆಸಿದ್ದಾರೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ, ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ.

ಬೆಸ್ಕಾA ಇಂಜಿನಿಯರ್ ಲೋಕೇಶ್ ಬಾಬು,ಕಂದಾಯ ಇಲಾಖೆ ಇನ್ಸ್ಪೆಕ್ಟರ್ ಸುರೇಶ್ ಬಾಬು,ಬಿಬಿಎಂಪಿ ತೆರಿಗೆ ಇನ್ಸ್ಪೆಕ್ಟರ್,ಕೃಷ್ಣಪ್ಪ ಬೆಂಗಳೂರು ಗ್ರಾಮಾAತರ ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್ ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯ ಡಿವೈಎಸ್‌ಪಿ ನಂಜುಡಯ್ಯ,ಕಲಬುರುಗಿ ಮಹಾನಗರ ಪಾಲಿಕೆ ಇಂಜಿನಿಯರ್ ರಾಮಪ್ಪ,ರಾಯಚೂರಿನ ಅಬಕಾರಿ ಇನ್ಸ್ ಪೆಕ್ಟರ್ ರಮೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಬೆಂಗಳೂರು ಗ್ರಾಮಾಂತರ ಬಿಹೆಚ್‌ಒ ಸುನೀಲ್ ಹಾಗೂ ಗದಗದ ಎಸ್‌ಡಿಎ ಲಕ್ಷ್ಮಣ್ ಅವರ ಕಚೇರಿ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕೈಗೊಳ್ಳಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾAತರ, ಗದಗ, ಕಲಬುರುಗಿ,ರಾಯಚೂರು, ಚಿತ್ರದುರ್ಗದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಐದು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್ ಪಿ ಜಾಧವ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಆದಾಯಕ್ಕಿಂತ ಅಧಿಕ ಆಸ್ತಿಗಳಿಗೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಬಿಕೆ ಉಮೇಶ್ ನೇತೃತ್ವದಲ್ಲಿ ಉದಯನಗರದಲ್ಲಿರುವ ನಿವಾಸದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ದಾಳಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಅರಣ್ಯ ಇಲಾಖೆ ಎಸಿಎಫ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಠಲ್ ನಗರದಲ್ಲಿರುವ ಹಿರಿಯೂರು ಉಪ ವಿಭಾಗದ ಎಸಿಎಫ್ ಸುರೇಶ್ ಮನೆ ಸೇರಿ ೪ ಕಡೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಳ್ಳಕೆರೆ ನಿವಾಸ, ಹೊಸ ಬ್ಯಾಡರಹಟ್ಟಿ ಮನೆ, ಬೆಂಗಳೂರು ನಿವಾಸ, ಹಿರಿಯೂರು ಕಚೇರಿ ಮೇಲೆ ದಾಳಿ ಮಾಡಿ ನಾಲ್ಕು ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ದಾಳಿ:

ಕೊಪ್ಪಳ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಕೊಪ್ಪಳದ ಅಬಕಾರಿ ಇಲಾಖೆಯಲ್ಲಿ ನೀರಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರಮೇಶ ಅವರ ಬಿಟಿ ಪಾಟೀಲ್ ನಗರದ ಕಚೇರಿ, ಡಾಲರ್ಸ್ ಕಾಲೋನಿ ಬಾಡಿಗೆ ಮನೆ, ಸ್ವಗ್ರಾಮ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದ ತೋಟದ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಗದಗ ಜಿಲ್ಲಾ ಪಂಚಾಯಿತಿ ಎಸ್‌ಡಿಎ ಲಕ್ಷ್ಮಣ್ ಕರ್ಣಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಗದಗ ನಗರದ ಆರ್ ಕೆ ಬಡಾವಣೆಯ ಮನೆ ಸೇರಿದಂತೆ ಐದು ಕಡೆಗಳಲ್ಲಿ ಈ ದಾಳಿ ನಡೆದಿದೆ. ಗದಗ, ಗಜೇಂದ್ರಗಡ,ಸುರೇಶ್ ಬಾಬು ಹಾವೇರಿಯಲ್ಲಿ ಕರ್ಣಿಗೆ ಸಂಬAಧಿಸಿದ ಮನೆ ಮತ್ತು ಆಸ್ತಿ ಪರಿಶೀಲನೆ ನಡೆಸುತ್ತಿದ್ದು,ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದು ಒಟ್ಟಾರೆ ಮೌಲ್ಯ ಸದ್ಯಕ್ಕೆ ತಿಳಿದುಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular