Wednesday, December 4, 2024
Flats for sale
Homeಕ್ರೈಂಬೆಂಗಳೂರು : ಕಲ್ಟ್ ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ,ವಸತಿ ಸಚಿವ ಜಮೀರ್ ಅಹ್ಮದ್ ಪುತ್ರನ...

ಬೆಂಗಳೂರು : ಕಲ್ಟ್ ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ,ವಸತಿ ಸಚಿವ ಜಮೀರ್ ಅಹ್ಮದ್ ಪುತ್ರನ ವಿರುದ್ಧ ದೂರು ದಾಖಲು..!

ಬೆಂಗಳೂರು : ಕಲ್ಟ್ ಚಿತ್ರತಂಡದ ಯಡವಟ್ಟಿನಿಂದಾಗಿ ಗಿ ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರತಂಡದ ಯಡವಟ್ಟಿನಿಂದಾಗಿ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಕ್ಕೆ ಕಾರಣವಾದ ಕಲ್ಟ್ ಚಿತ್ರದ ನಾಯಕ ಜೈದ್ ಖಾನ್ ಹಾಗೂ ನಿರ್ದೇಶಕ ಅನಿಲ್ ಮೇಲೆ ಗಂಭೀರ ಆರೋಪ ಮಾಡಿ ದೂರು ದಾಖಲಿಸಲಾಗಿದೆ.

ಕಳೆದ ನ.25 ರಂದು ಚಿತ್ರದುರ್ಗದಲ್ಲಿ ಕಲ್ಟ್ ಚಿತ್ರತಂಡ ಚಿತ್ರೀಕರಣ ನಡೆಸುತ್ತಿತ್ತು. ಕಲ್ಟ್ ಚಿತ್ರಕ್ಕೆ ಸಂತೋಷ್ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಹಲವು ಸಿನಿಮಾಗಳಿಗೆ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿರುವ ಸಂತೋಷ್ ಸ್ವಂತವಾಗಿ ಡ್ರೋನ್ ಹೊಂದಿದ್ದರು. 25 ಲಕ್ಷ ರೂ. ಸಾಲ ಮಾಡಿ ಡ್ರೋನ್ ಖರೀದಿಸಿದ್ದ ಸಂತೋಷ್ ಸಿನಿಮಾ ಶೂಟಿಂಗ್‌ಗಾಗಿ ದಿನಕ್ಕೆ 25 ಸಾವಿರ ರೂ. ನಿಗದಿಮಾಡಿದ್ದರು. ಮಾರ್ಟಿನ್, ಯುವ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್, ಕಲ್ಟ್ ಚಿತ್ರಕ್ಕೂ ಶೂಟಿಂಗ್ ಮಾಡುವಕೆಲಸಕ್ಕೆ ಒಪ್ಪಿಕೊಂಡಿದ್ದರು. ಡ್ರೋನ್‌ನಲ್ಲಿ ಚಿತ್ರೀಕರಣ ಮಾಡುವುದು ಕಷ್ಟ ಇದೆ ಎನ್ನುವ ಎಚ್ಚರಿಕೆ ಕೊಟ್ಟಿದ್ದರೂ ನಿರ್ದೇಶಕ ಮಾಡಲೇಬೇಕು ಎಂದು ಒತ್ತಾಯ ಮಾಡಿದ್ದರು ಎನ್ನಲಾಗಿದೆ.

ಶೂಟಿಂಗ್ ವೇಳೆ ಡ್ರೋನ್ ವಿಂಡ್ ಫ್ಯಾನ್‌ಗೆ ತಗುಲಿ ಪೀಸ್ ಪೀಸ್ ಆಗಿತ್ತು. ಇದಾದ ಬಳಿಕ ಸಂತೋಷ್‌ಗೆ ಕೊಂಚವೂ ನಷ್ಟ ಕಟ್ಟಿಕೊಡದ ಚಿತ್ರತಂಡ ಕಲ್ಟ್ ಚಿತ್ರವನ್ನು ಸಚಿವ ಜಮೀರ್ ಪುತ್ರ ಜೈದ್ ನಿರ್ಮಾಣ ಮಾಡುತ್ತಿದ್ದರು. ಹೀಗಾಗಿ ಸಂತೋಷ್ ಜೈದ್ ಬಳಿಯೇ ಪರಿಹಾರ ನೀಡುವಂತೆ ಕೇಳಿಕೊಂಡಿದ್ದ. ಆದರೆ ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಜಮೀರ್ ಪುತ್ರ ಜೈದ್ ಸಹಿ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್ ರೆಕಾರ್ಡಿಂಗ್ ಆಗಿದ್ದ ಮೆಮೊರಿ ಕಾರ್ಡ್ ಕಿತ್ತುಕೊಂಡಿದ್ದಾರೆ.

ಆಧಾರ್ ಕಾರ್ಡ್ ನಂಬರ್ ಸಹ ಬರೆಸಿಕೊಂಡು ಅವಮಾನ ಮಾಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.ಘಟನೆ ಬಳಿಕ ಸಂತೋಷ್ ಸಹೋದರಿ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಮುಂದಾದರು. ಆದರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್ಕ ಳುಹಿಸಿದ್ದರು ಎನ್ನುವ ಆರೋಪವೂ ಇದೆ. ನಂತರ ಆಸ್ಪತ್ರೆಯ ಮೇಮೊ ಮೇಲೆ ಎನ್‌ಸಿಆರ್ ದಾಖಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಕಲ್ಟ್ ಚಿತ್ರತಂಡವನ್ನಸಂಪರ್ಕಿಸಿದ್ದಾರೆ . ಘಟನೆ ಸಂಬಂಧ ಸಿನಿಮಾ ನಿರ್ದೇಶಕನಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular