Monday, March 17, 2025
Flats for sale
HomeUncategorizedಬೆಂಗಳೂರು : ಹುಟ್ಟುವುದಕ್ಕು ಮುನ್ನ ದತ್ತು ಒಪ್ಪಂದಕ್ಕೆ ಕಾನೂನಿನಲ್ಲಿ ಮಾನ್ಯತೆಯಿಲ್ಲ : ಉಚ್ಚ ನ್ಯಾಯಾಲಯ

ಬೆಂಗಳೂರು : ಹುಟ್ಟುವುದಕ್ಕು ಮುನ್ನ ದತ್ತು ಒಪ್ಪಂದಕ್ಕೆ ಕಾನೂನಿನಲ್ಲಿ ಮಾನ್ಯತೆಯಿಲ್ಲ : ಉಚ್ಚ ನ್ಯಾಯಾಲಯ

ಬೆಂಗಳೂರು : ಹಣಕ್ಕಾಗಿ ಮಗುವನ್ನು ದತ್ತು ಪಡಿಯುವ ಪ್ರಕರಣ ಕಾನೂನಿಯಲ್ಲಿ ಅವಕಾಶವಿಲ್ಲ ಮಗುವಿಗೆ ಜನ್ಮ ನೀಡುವುದಕ್ಕೂ ಮುನ್ನವೇ ದತ್ತು ಸ್ವೀಕಾರಕ್ಕಾಗಿ ಅನ್ಯಧರ್ಮೀಯ ಇಬ್ಬರು ದಂಪತಿಗಳು ಮಾಡಿಕೊಂಡಿದ್ದ ಒಪ್ಪಂದದ ಕುರಿತು ಹೈಕೋರ್ಟ್ಆಘಾತ ವ್ಯಕ್ತಪಡಿಸಿದೆ.

ಬಡತನದ ಕಾರಣಕ್ಕೆ ಮಗುವಿನ ದತ್ತು ಒಪ್ಪಲು ಸಾಧ್ಯವಿಲ್ಲ ,ಮುಸ್ಲಿಂ ದಂಪತಿಗಳಿಂದ ಹಿಂದೂ ಮಗುವಿನ ದತ್ತು ವಿಚಾರಕ್ಕೆ ಸಂಬಂಧಿಸಿದಂತೆ ಮಹಮದೀಯ ಕಾನೂನಿನಲ್ಲಿಯೂ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಮಗುವಿನ ಪೋಷಕರು ಬಡತನದಿಂದ ಮಗುವನ್ನು ಪೋಷಣೆ ಮಾಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ 2020ರ ಮಾರ್ಚ್ 21 ಎಂದು ದತ್ತು ಸ್ವೀಕಾರ ಒಪ್ಪಂದಕ್ಕೆ ಸಹಿ ಹಾಕಿದ್ದರು. ಇದಾದ ಕೆಲ ದಿನಗಳ ಬಳಿಕ 2020ರ ಮಾರ್ಚ್ 26 ರಂದು ಮಗು ಜನಿಸಿತ್ತು. ಈ ಸಂಬಂಧ ಉಡುಪಿ ಜಿಲ್ಲೆಯ ಡಿಸಿಪಿಯು 2021 ರಲ್ಲಿ ದೂರು ದಾಖಲಿಸಿಕೊಂಡಿತ್ತು. ಅಲ್ಲದೇ, ಮಗುವನ್ನು ವಶಕ್ಕೆ ಪಡೆದು ಮಕ್ಕಳ ಆರೈಕೆ ಘಟಕಕ್ಕೆ ನೀಡಲಾಗಿತ್ತು.

ಇದನ್ನು ಇಬ್ಬರೂ ಪೋಷಕರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಹೇಮಲೇಖ ಅವರನ್ನೊಳಗೊಂಡ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಅಲ್ಲದೆ, ನಿಜವಾದ ತಂದೆ ಹಾಗೂ ತಾಯಿ ಮಗುವನ್ನು ಹಿಂಪಡೆಯಲು ಇಚ್ಛಿಸಿದಲ್ಲಿ ಅಂತಹ ಮನವಿಯನ್ನು ಪರಿಗಣಿಸಿ ಕಾನೂನಿನ ಪ್ರಕಾರ ಮಕ್ಕಳ ಕಲ್ಯಾಣ ಸಮಿತಿ ಕ್ರಮ ಕೈಗೊಳ್ಳಬಹುದು.

ಮೊಹಮ್ಮದೀಯ ಕಾನೂನಿನ ತತ್ವಗಳ ಅಡಿಯಲ್ಲಿಯೂ ಸಹ ಈ ರೀತಿಯ ಒಪ್ಪಂದಕ್ಕೆ ಅವಕಾಶವಿಲ್ಲ. ಹಿಂದೂ ಸಮುದಾಯಕ್ಕೆ ಸೇರಿದವರು ಮಗುವನ್ನು ಮುಸ್ಲಿಂ ಸಮುದಾಯದ ದಂಪತಿಗೆ ದತ್ತು ನೀಡುವುದಕ್ಕೆ ಅಂಗೀಕಾರಾರ್ಹವಲ್ಲ ಎಂದು ನ್ಯಾಯಪೀಠ ತಿಳಿಸಿದೆ.ಕಾಯಿದೆ 2015ರ ಪ್ರಕಾರ ಪಾಲಕರು ಆರ್ಥಿಕವಾಗಿ ಸದೃಢರಾಗಿರದಿದ್ದರೆ ಮಗುವಿನ ಪೋಷಣೆಗೆ ಸಾಕಷ್ಟು ಅವಕಾಶಗಳಿವೆ.

ಮಗುವಿನ ಪೋಷಕರು ಬಡತನದಿಂದ ಮಗುವನ್ನು ಪೋಷಣೆ ಮಾಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ 2020ರ ಮಾರ್ಚ್ 21 ಎಂದು ದತ್ತು ಸ್ವೀಕಾರ ಒಪ್ಪಂದಕ್ಕೆ ಸಹಿ ಹಾಕಿದ್ದರು. ಇದಾದ ಕೆಲ ದಿನಗಳ ಬಳಿಕ 2020ರ ಮಾರ್ಚ್ 26 ರಂದು ಮಗು ಜನಿಸಿತ್ತು. ಈ ಸಂಬಂಧ ಉಡುಪಿ ಜಿಲ್ಲೆಯ ಡಿಸಿಪಿಯು 2021 ರಲ್ಲಿ ದೂರು ದಾಖಲಿಸಿಕೊಂಡಿತ್ತು. ಅಲ್ಲದೇ, ಮಗುವನ್ನು ವಶಕ್ಕೆ ಪಡೆದು ಮಕ್ಕಳ ಆರೈಕೆ ಘಟಕಕ್ಕೆ ನೀಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular