ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮುಂಬರುವ ದಿನದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಅಂದರೆ ಮತ್ತೇರಡು ಚಂಡಮಾರುತದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡಿಸೆಂಬರ್ ೧೩ ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಚಿತ್ರದುರ್ಗ,ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಾಮರಾಜನಗರ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ, ಇತರೆಡೆ ಒಣ ಹವೆ ಮುಂದುವರಿಯಲಿದೆ. ಹಡಗಲಿ, ಪುತ್ತೂರು, ಅಣ್ಣಿಗೆರೆ, ಹರಪನಹಳ್ಳಿ, ಉಪ್ಪಿನಂಗಡಿ, ಬೈಲಹೊಂಗಲ ,ಮೂಲ್ಕಿ,ಪಣಂಬೂರು, ಹುಣಸಗಿ, ಗದಗ, ಮುದಗಲ್, ಬಾದಾಮಿ, ಗದಗ, ಮುನಿರಾಬಾದ್, ದಾವಣಗೆರೆ, ಬಾಳೆಹೊನ್ನೂರು, ಜಯಪುರ, ಶೃಂಗೇರಿಯಲ್ಲಿ ಮಳೆಯಾಗಿದೆ.
ಚಾಮರಾಜನಗರದಲ್ಲಿ ಕನಿಷ್ಠ ತಾಪಮಾನ 16.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದುಮೋಡ ಕವಿದ ವಾತಾವರಣವಿದ್ದು, ಎಚ್‌ಎಎಲ್‌ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ನಗರದಲ್ಲಿ 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ತಾಪಮಾನ, 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಜಿಕೆವಿಕೆ ಗರಿಷ್ಠ ತಾಪಮಾನ 30.೦ ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸಿರುವ ಫೆಂಗಲ್ ಚಂಡಮಾರುತ ಅರೇಬಿಯಾ ಕಡೆಗೆ ಸಾಗಿದೆ. ಕಳೆದ ಒಂದು ವಾರದಿಂದ ಮಳೆ, ಗಾಳಿ, ಚಳಿಯ ಹೊಡೆತಕ್ಕೆ ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಈ ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುತ್ತಿರುವಾಗ ಇನ್ನೂ ಎರಡು ಚಂಡಮಾರುತಗಳು ರಚನೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.