Saturday, March 7, 2026
Flats for sale
Homeರಾಜ್ಯಬೆಂಗಳೂರು : ಸಾಮಾಜಿ ಜಾಲತಾಣದಲ್ಲಿ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್,ದೂರು ದಾಖಲು ..!

ಬೆಂಗಳೂರು : ಸಾಮಾಜಿ ಜಾಲತಾಣದಲ್ಲಿ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್,ದೂರು ದಾಖಲು ..!

ಬೆಂಗಳೂರು : ಇತ್ತಿಚ್ಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿಧರ್ಮ ಧರ್ಮಗಳ ನಡುವೆ ಅವಹೇಳನಕಾರಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಸರಕಾರ ಸೋಷಿಯಲ್ ಮೀಡಿಯಾ ಗಾಲ ಮೇಲೆ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳುವ ದಿನಗಳು ಬಹಳ ಸನಿಹವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಹಿಂದೂ ದೇವರುಗಳ ಅವಹೇಳನಕಾರಿ ಕಾಮೆಂಟ್ ಗಳು ಹೆಚ್ಚುತ್ತಿದ್ದು ಪೊಲೀಸರು ಈ ಬಗ್ಗೆ ಸರಿಯಾದ ಕ್ರಮ ವಹಿಸಬೇಕೆಂದು ಧಾರ್ಮಿಕ ಮುಖಂಡರು ತಿಳಿಸಿದ್ದಾರೆ .ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್​ ಮಾಡಿದ್ದು ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ.

ಅವರ ಧರ್ಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. ನಾವು ಅವರ ತರಹ ಬೆಂಕಿ ಹಚ್ಚುವ ಕೆಲಸ ಮಾಡಲ್ಲ. ಮಾಡಿದರೆ ಅತಿರೇಕಕ್ಕೆ ಹೋಗುತ್ತೆ ಅವರವರ ನಂಬಿಕೆಗೆ ದ್ರೋಹಬಗೆಯುವಂಥಹ ಕೆಲಸ ಹಿಂದೂ ಧರ್ಮದಲ್ಲಿಲ್ಲ,ಈ ಕಾಮೆಂಟ್ ಅತ್ಯಂತ ಕ್ರೂರವಾಗಿದೆ, ಈ ಕಾಮೆಂಟ್​ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ದೂರುದಾರರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular