Sunday, March 16, 2025
Flats for sale
Homeಸಿನಿಮಾಬೆಂಗಳೂರು : ಕನ್ನಡ ಖ್ಯಾತ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಕನ್ನಡ ಖ್ಯಾತ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಕಿರುತೆರೆ ಖ್ಯಾತ ಚಿತ್ರ ನಟಿ ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ‌ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್‌ ಟು ಮರ್ಡರ್, ವಂದನಾ ಸಿನಿಮಾದಲ್ಲಿ ನಟಿಸಿದ ಶೋಭಿತಾ ಶಿವಣ್ಣ ಅರು ಇದೀಗ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಹೈದರಾಬಾದ್‌ನಲ್ಲಿ ಸಾವಿಗೆ ಶರಣಾಗಿರೋ ಸುದ್ದಿ ಕೇಳಿ ಇಡೀ ಕಿರುತೆರೆ ಬಳಗ ಶಾಕ್​ಗೆ ಒಳಗಾಗಿದೆ. ಬ್ರಹ್ಮಗಂಟು, ನಿನ್ನಿಂದಲೇ ಹೀಗೆ ಹಲವು ಧಾರಾವಾಹಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು ನಟಿ ಶೋಭಿತಾ ಶಿವಣ್ಣ. ಅದರಲ್ಲೂ ಬ್ರಹ್ಮಗಂಟು ಸೀರಿಯಲ್​​ನಲ್ಲಿ ವಿಲನ್ ಶೇಡ್​ನಲ್ಲಿ ನಟಿ ಶೋಭಿತಾ ಶಿವಣ್ಣ ಕಾಣಿಸಿಕೊಂಡಿದ್ದರು.ಇದೀಗ ತೆಲುಗು ಚಿತ್ರರಂಗದಲ್ಲಿ ನಟಿಸುತ್ತಾ ನೆಲೆಸಿದ್ದರು.

ಹಾಸನ‌‌ ಮೂಲದ ಸಕಲೇಶಪುರದ ನಟಿ ಪದವಿ ಮುಗಿಸಿ ಬೆಂಗಳೂರಿಗೆ ಬಂದಿದ್ದು ಶೋಭಿತಾ ಕನ್ನಡದ 12ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದರು. ಇನ್ನು ಕಿರುತೆರೆಯಲ್ಲಿ ಬ್ರಹ್ಮಗಂಟು ಹಾಗೂ ನಿನ್ನಿಂದಲೇ ಧಾರಾವಾಹಿಯಲ್ಲಿ ಸಹ ನಟಿಸಿದ್ದರು.ಕಳೆದ ಎರಡುವರ್ಷಗಳ ಹಿಂದೆ ಹೈದರಾಬಾದ್‌ನಲ್ಲಿ ಮದುವೆಯಾಗಿ ಸೆಟಲ್ ಆಗಿದ್ದರು.

ಮದುವೆ ಆದಾಗಿನಿಂದ ಸಿನಿಮಾ ಇಂಡಸ್ಟ್ರಿಯಿಂದ‌ ಅಂತರ ಕಾಯ್ದುಕೊಂಡಿದ್ದು ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಾಹಿತಿ ಇದೆ. ಹೈದರಾಬಾದ್‌ನಲ್ಲಿ ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುತ್ತಾರೆಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular