Monday, March 17, 2025
Flats for sale
Homeರಾಜಕೀಯಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇನ್ನಿಲ್ಲ …!

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇನ್ನಿಲ್ಲ …!

ಬೆಂಗಳೂರು : ಹಿರಿಯ ರಾಜಕಾರಣಿ ಬೆಂಗಳೂರಿನ ಅಭಿವೃದ್ಧಿಯ ಹರಿಕಾರ ಎಸ್. ಎಂ. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇದಾದ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ಅಕ್ಟೋಬರ್ 19ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್​ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್​ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. 1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್​ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್​​ಗೆ ಶಕ್ತಿ ತುಂಬಿತ್ತು.

2004 ರ ಡಿಸೆಂಬರ್​​​ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008 ರ ಮಾರ್ಚ್​ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.

ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್​ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular