Thursday, March 19, 2026
Flats for sale
Homeರಾಜ್ಯಬೆಂಗಳೂರು : ಬಹುಕೋಟಿ ಭೋವಿ ನಿಗಮ ಹಗರಣ : ದನದ ಕೊಟ್ಟಿಗೆಯಲ್ಲಿರುವ ಕಂಪನಿ ಖಾತೆಗೂ ಕೋಟಿ...

ಬೆಂಗಳೂರು : ಬಹುಕೋಟಿ ಭೋವಿ ನಿಗಮ ಹಗರಣ : ದನದ ಕೊಟ್ಟಿಗೆಯಲ್ಲಿರುವ ಕಂಪನಿ ಖಾತೆಗೂ ಕೋಟಿ ಕೋಟಿ ಹಣ ಜಮೆ..!

ಬೆಂಗಳೂರು : ರಾಜ್ಯದಲ್ಲಿ ಜನಸಾಮನ್ಯರಿಗೆ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ರಾಜಕಾರಣಿಗಳ ಚೇಲಗಳಿಗಂತೂ ಬಂಪರ್ ಲಾಟರಿ ಹೊಡೆದಿರುವುದು ಅಂತೂ ನಿಜ. ಸಿಐಡಿ ತನಿಖೆ ನಡೆಸುತ್ತಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣ ಬಹು ದೊಡ್ಡದಾಗಿ ಸುದ್ದಿಯಾಗಿದೆ. ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿದ್ದಾರೆ.

ಬಹುಕೋಟಿ ಭೋವಿ ನಿಗಮ ಹಗರಣ ಮತ್ತೊಂದು ದೊಡ್ಡ ಹಗರಣ ಅಂತಲೂ ಹೇಳಬಹುದು ಐದು ಖಾಸಗಿ ಕಂಪನಿಗಳಿಗೆ 34 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಪತ್ತೆಯಾಗಿದೆ. ತನಿಖೆ ಎದುರಿಸಿದ್ದ ಜೀವಾ ಅವರ ಖಾತೆ​ಗೆ 7 ಕೋಟಿ 16 ಲಕ್ಷ ರೂ. ಜಮೆಯಾಗಿದೆ. ಈ ಹಗರಣದಲ್ಲಿ ಭಾಗಿಯಾಗಿರುವ ಅನೇಕ ಅಧಿಕಾರಿಗಳ ವಿರುದ್ಧ ತನಿಖೆ ನಡೆಯುತ್ತಿದೆ.

ಐದು ದಿನಗಳ ಹಿಂದೆ ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು ಮೃತ ವ್ಯಕ್ತಿ ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ, ಐದು ಕಂಪನಿಗಳಿಗೆ 34.18 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ.ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ, ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ, ಮಾಜಿ ಅಧೀಕ್ಷಕ ಸುಬ್ಬಪ್ಪ ಅವರು ತಮ್ಮ ನೆರೆಹೊರೆಯವರು, ಬಾಡಿಗೆದಾರರು ಸಂಬಂಧಿಕರ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದು, ಅವರ ಖಾತೆಗಳಿಗೆ ಹಣ ಜಮೆಯಾಗಿದೆ.

ಸರ್ಕಾರವು ಭೋವಿ ಸಮುದಾಯದ ಅಭ್ಯುದಯಕ್ಕೆ ರೂಪಿಸಿದ್ದ ಆರ್ಥಿಕ ಯೋಜನೆಗಳಲ್ಲಿ ನಿಗಮದ ಕೆಲ ಅಧಿಕಾರಿಗಳು ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ. 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಗೊತ್ತಾಗಿದೆ. ಬೆಂಗಳೂರು ನಗರದಲ್ಲೇ ಕಾರ್ಯಚಟುವಟಿಕೆ ಹೊಂದಿವೆ ಎಂದು ಬಿಂಬಿಸಿಕೊಂಡಿದ್ದ ಈ ಕಂಪನಿಗಳ ಬೆನ್ನತ್ತಿ ಹೋಗಿದ್ದ ಅಧಿಕಾರಿಗಳು, ಕೆಲ ಕಂಪನಿಗಳ ಕಚೇರಿಗಳು ದನದ ಕೊಟ್ಟಿಗೆಯಲ್ಲಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ. ಒಟ್ಟಿನಲ್ಲಿ ಯಾರ್ಯಾರ ಖಾತೆಗೆ ಎಷ್ಟೆಷ್ಟು ಜಮೆಯಾಗಿದೆ ಎಂಬುದನ್ನು ಮುಂದೆ ನಡೆಯುವ ತನಿಖೆಯಲ್ಲಿ ಹೊರಬೀಳಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular