Thursday, March 27, 2025
Flats for sale
Homeಜಿಲ್ಲೆಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು,ನ.19(ಕ.ವಾ):- ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು.

ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ,
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್,
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular