ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿಗಳು
ಮಂಗಳೂರು :- ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಡಿ.25ರ ಭಾನುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.