ದಾವಣಗೆರೆ : ಭಾನುವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾವಣಗೆರೆಯ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಮೃತರನ್ನು 20 ರಿಂದ 24 ವರ್ಷದ ಕಾರ್ತಿಕ್, ವಿವೇಕ್ ಮತ್ತು ಮೋಹನ್ ಎಂದು ಪೊಲೀಸರು ಗುರುತಿಸಿದ್ದಾರೆ. ದಾವಣಗೆರೆ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ವೇಗವಾಗಿ ಬಂದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಹಿಂಬದಿ ಕುಳಿತಿದ್ದ ನಾಲ್ಕನೇ ವಿದ್ಯಾರ್ಥಿ ರುದ್ರೇಶ್ ಪಾಟೀಲ್ ಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಕ್ಯಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.