Monday, July 14, 2025
Flats for sale
Homeಜಿಲ್ಲೆಮಂಗಳೂರು: ವಿ.ವಿ ಫಲಿತಾಂಶ ವಿಳಂಬ.ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ.ಎಬಿವಿಪಿ ಕಾರ್ಯಕರ್ತರು,ಪೊಲೀಸರ ನಡುವೆ ನೂಕಾಟ,ತಳ್ಳಾಟ.

ಮಂಗಳೂರು: ವಿ.ವಿ ಫಲಿತಾಂಶ ವಿಳಂಬ.ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನ.ಎಬಿವಿಪಿ ಕಾರ್ಯಕರ್ತರು,ಪೊಲೀಸರ ನಡುವೆ ನೂಕಾಟ,ತಳ್ಳಾಟ.

ಉಳ್ಳಾಲ : ಮಂಗಳೂರು ವಿ.ವಿ ಫಲಿತಾಂಶ ವಿಳಂಬ ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯ ಮಂಗಳೂರು ವಿ.ವಿ ಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದಲ್ಲದೆ ವಿ.ವಿ ಸಿಂಡಿಕೇಟ್ ಸಭೆಗೆ ಏಕಾ ಏಕಿ ನುಗ್ಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ ,ತಳ್ಳಾಟ ನಡೆದಿದೆ.

ಸುಮಾರು 500 ರಷ್ಟಿದ್ದ ಎಬಿವಿಪಿ ಕಾರ್ಯಕರ್ತರು ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ಅವರನ್ನ ತಡೆದಿದ್ದಾರೆ.ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ತಳ್ಳಿ ಆಡಳಿತ ಸೌಧದೊಳಗೆ ನುಗ್ಗಿದ್ದು ಪೊಲೀಸರು ಅವರನ್ನ ತಡೆಯಲು ಯತ್ನಿಸಿದ್ದು ನೂಕಾಟ,ತಳ್ಳಾಟ ನಡೆದಿದೆ.

ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು,ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಚೆಲ್ಲಾಟವಾಡುತ್ತಿದೆ ಎಂದರು.

ಮಂಗಳೂರು ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಅವರು ಮಾತನಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬಕ್ಕೆ ಪರೀಕ್ಷಾಂಗ ಕುಲಸಚಿವರ ರಾಜೀನಾಮೆ ಆಗ್ರಹಿಸುತ್ತಿದ್ದು ಆ ಕಾರಣದಿಂದ ನನ್ನಿಂದ ಸಮಸ್ಯೆ ಆಗಿದ್ದು ಪರಿಹಾರ ದೊರಕೋದಾದ್ರೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ರಾಜೀನಾಮೆ ಪತ್ರ ಬರೆದು ಸಿದ್ಧನಾಗಿಯೇ ಬಂದಿದ್ದೇನೆ ಎಂದರು.ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಬಲ್ಲೆ ಎಂದರು.
ಪರೀಕ್ಷಾಂಗ ಕುಲಸಚಿವರ ಭರವಸೆಯ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಿಂದ ಹಿಂಸರಿದರು.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಕುಲಗೇರಿ,ತಾಲೂಕು ಸಂಚಾಲಕ ಆದರ್ಶ್ ಉಪ್ಪಾರ ,ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular