ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣ ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಮನಾಫ್ ಯುಟ್ಯೂಬ್‌ನಲ್ಲಿ ಜುಲೈ 11 ರಂದು ಅಪ್ಲೋಡ್ ಆಗಿತ್ತು. ಬಂಗ್ಲೆಗುಡ್ಡೆಯಿಂದಲೇ ಬುರುಡೆ ತಂದಿರುವುದಾಗಿ ಜಯಂತ್.ಟಿ ಹೇಳಿದ್ದಾರೆ. ಕಾಡು ಪ್ರದೇಶದಲ್ಲಿ ಶೂಟ್ ಮಾಡಿರುವ ವಿಡಿಯೋ ಇದಾಗಿದ್ದು, ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಪತ್ತೆಯಾಗಿರುವ ಬುರುಡೆಯನ್ನ ಕತ್ತಿ ಮೂಲಕ ಎತ್ತಿ-ಕೊಂಡು ತಂದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮೂಲಕಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ವ್ಯಕ್ತವಾಗಿತ್ತು.
ಎಸ್‌ಐಟಿ ಅಧಿಕಾರಿಗಳವಶದಲ್ಲಿರುವ ಚಿನ್ನಯ್ಯ ತಂದಿದ್ದ ಬುರುಡೆ ಎಲ್ಲಿದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿ. ಪ್ರಶ್ನೆ ಮಾಡಿ ಸುಸ್ತಾಗಿದ್ದರು. ಸದ್ಯ ಇದೀಗ ಚಿನ್ನಯ್ಯ ತಂದಿದ್ದ ಬುರುಡೆ ಎಲ್ಲಿದು ಎನ್ನುವುದು ಗೊತ್ತಾಗಿದೆ.ಚಿನ್ನಯ್ಯ ತಂದಿದ್ದ ಬುರುಡೆಯನ್ನ ಬಂಗ್ಲೆಗುಡ್ಡೆಯಿಂದ ತಂದಿರುವುದಾಗಿ ಜಯಂತ್ ಹೇಳಿದ್ದಾನೆ. ಅರಣ್ಯದಲ್ಲಿ ಭೂಮಿಯ ಮೇಲ್ಬಾಗದಲ್ಲಿ ಇದ್ದ ಕಾಡಿನಲ್ಲಿ ಒಂದು ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಬುರುಡೆ ಪತ್ತೆ ಆಗಿದೆ. ಬುರುಡೆಯನ್ನು ಬುರುಡೆಯನ್ನು ತಂದಿದ್ದರು. ಮೇಲೆತ್ತುಕೊಳ್ಳಬೇಕಾದರೆಕತ್ತಿಯನ್ನು ಬಳಕೆ ಮಾಡಿ ಅದನ್ನು ಚೀಲದಲ್ಲಿ ಹಾಕಿಕೊಳ್ಳಲಾಗಿದೆ. ಇದನ್ನು ಕರ ಹಿಡಿಯಲಾಗಿದೆ.
ಮುಸುಕುಧಾರಿ ಚಿನ್ನಯ್ಯ, ‘ತಲೆಬುರುಡೆಯನ್ನು ನಾನು ಧರ್ಮಸ್ಥಳದಿಂದ ತಂದಿಲ್ಲ. ಇದನ್ನು ನನಗೆ ಕೊಟ್ಟಿದ್ದು ಜಯಂತ್’ ಎಂದು ಎಸ್‌ಐಟಿ ಮುಂದೆ ತಪ್ಪೊಪ್ಪಿಕೊಂಡಿದ್ದ. ಹೀಗಾಗಿ ದೂರುದಾರ ಜಯಂತ್‌ರನ್ನು ವಿಚಾರಣೆಗೆ ಕರೆಸಿ ಎಸ್ಐಟಿ ಫುಲ್ ಗ್ರಿಲ್ ಮಾಡಿತ್ತು. ಆದರೀಗ ಜಯಂತ್ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ. ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣನವರ್ ಎಂದಿದ್ದಾರೆ. ಹೀಗಾಗಿ ಬುರುಡೆ ಸುತ್ತಿಬಳಸಿ ಕೊನೆಗೆ ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದುನಿಂತಿದೆ.ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣ ಎಂದು ಜಯಂತ್ ಕಡ್ಡಿ ಮುರಿದಂತೆ ಹೇಳಿದ್ದಾರೆ. ಆದರೆ ಗಿರೀಶ್ ಮಟ್ಟಣ್ಣನವರ್ ಬುರುಡೆ ಬಗ್ಗೆ ತಮಗೇನು ಗೊತ್ತಿಲ್ಲ ಅಂತಾ ಉತ್ತರಿಸಿದ್ದಾರೆ. ಹೀಗಾಗಿ ಬುರುಡೆ ಮೂಲ ಕುತೂಹಲ ಮೂಡಿಸಿದೆ.
ತಿಮರೋಡಿ ಮನೆಗೆ ಭೇಟಿ:
ಕೇರಳ ಮೂಲದ ಮನಾಫ್, ಪ್ರಕರಣ ಆರಂಭಕ್ಕೂ ಮೊದಲೇ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ ಸುತ್ತಾಮುತ್ತಾಓಡಾಡಿದ್ದ. ಮಹೇಶ್ ತಿಮರೋಡಿ ಮನೆಗೂ ಭೇಟಿ ನೀಡಿ ಹೋರಾಟಕ್ಕೆ ಅಭಿನಂದನೆ ಸಲ್ಲಿಸಿದ್ದ ಎಂಬ ಮಾಹಿತಿ ದೊರೆತಿದೆ.


