Thursday, March 27, 2025
Flats for sale
Homeಕ್ರೈಂ3 ವರ್ಷದ ಮಗುವನ್ನು ಕೊಂದು ತಂದೆ ಆತ್ಮಹತ್ಯೆ !

3 ವರ್ಷದ ಮಗುವನ್ನು ಕೊಂದು ತಂದೆ ಆತ್ಮಹತ್ಯೆ !

ಕೋಲಾರ ; ಮೂರುವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ ನಡೆದಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸ್ ವಿಚಾರಣೆಗೆ ಹೆದರಿ ತನ್ನ ಮೂರು ವರ್ಷದ ಮಗಳನ್ನು ಕೊಂದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನ ಬಾಗಲೂರು ರಾಗಾ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಗುಜರಾತ್ ಮೂಲದ ವ್ಯಕ್ತಿ ರಾಹುಲ್ ಹಾಗೂ ಮೂರು ವರ್ಷದ ಮಗು ಜಿಯಾ ಶವ ಕೋಲಾರ ತಾಲ್ಲೂಕು ಕೆಂದಟ್ಟಿ ಗ್ರಾಮದ ಕೆರೆಯಲ್ಲಿ ಕಳೆದ ರಾತ್ರಿ ಪತ್ತೆಯಾಗಿದೆ.

ಬೆಳಗಿನ ಜಾವ ಕೆರೆಯ ದಡದಲ್ಲೇ ನೀಲಿ ಬಣ್ಣದ I-20 ಕಾರು ಸಹ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದಾಗ ತಂದೆ-ಮಗಳ ಶವ ಪತ್ತೆಯಾಗಿದೆ.

ಪೋಲಿಸರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪತ್ನಿ ಭವ್ಯ, ಪತಿ ಹಾಗೂ ಮಗು ಜಿಯಾಳನ್ನು ಗುರುತಿಸಿದ್ದಾರೆ. ಬುಧವಾರ ಬೆಳಗ್ಗೆ ಮಗುವನ್ನು ಶಾಲೆಗೆ ಬಿಟ್ಟು ಬರೋದಾಗಿ ರಾಹುಲ್ ಹೇಳಿ ಹೋಗಿದ್ದರು. ಬಳಿಕ ಫೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ರಾಹುಲ್ – ಭವ್ಯ ದಂಪತಿ ಗುಜರಾತ್‌ನಿಂದ (Gujarat) ಬೆಂಗಳೂರಿನಲ್ಲಿ ಬಂದು ನೆಲೆಸಿದ್ದರು. ಕಳೆದ 6 ತಿಂಗಳಿನಿಂದ ರಾಹುಲ್ ಕೆಲಸವಿಲ್ಲದೆ ಮನೆಯಲ್ಲೇ ಇದ್ದರು. ಇದರಿಂದ ಸಾಲದ ಹೊರೆ ಹೆಚ್ಚಾಯಿತು.

ತಮ್ಮ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ ಎಂದು ಬಾಗಲೂರು ಪೊಲೀಸ್ ಠಾಣೆಗೆ ರಾಹುಲ್ ದೂರು ನೀಡಿದ್ದರು. ಪದೇ-ಪದೇ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿ ಬರುತ್ತಿದ್ದರು. ಪೊಲೀಸರು ದೂರಿನ ಅನ್ವಯ ತನಿಖೆ ನಡೆಸಿದಾಗ, ಮನೆಯಲ್ಲಿ ಇದ್ದ ಒಡವೆಯನ್ನು ರಾಹುಲ್ ತಾನೇ ಕದ್ದು ಚೆಮ್ಮನೂರ್ ಜ್ಯುವೆಲರ್ಸ್‌ನಲ್ಲಿ ಅಡವಿಟ್ಟು, ಬಳಿಕ ಕಳ್ಳತನದ ನಾಟಕವಾಡಿ ಸುಳ್ಳು ದೂರು ನೀಡಿದ್ದ ವಿಚಾರ ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular