Friday, November 22, 2024
Flats for sale
Homeಜಿಲ್ಲೆಉಳ್ಳಾಲ ; ಪೊಲೀಸ್ ಠಾಣೆಯಲ್ಲಿ ಭಾರೀ ಭ್ರಷ್ಟಾಚಾರ - ಪೊಲೀಸ್ ಕಮೀಷನರ್‌ ಶಶಿಕುಮಾರ್ ಗೆ ಲೋಕಾಯುಕ್ತ...

ಉಳ್ಳಾಲ ; ಪೊಲೀಸ್ ಠಾಣೆಯಲ್ಲಿ ಭಾರೀ ಭ್ರಷ್ಟಾಚಾರ – ಪೊಲೀಸ್ ಕಮೀಷನರ್‌ ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್.

ಉಳ್ಳಾಲ ; ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರೀ ಭ್ರಷ್ಟಾಚಾರ ಆರೋಪದ ಹಿನ್ನೆಲೆ ,ಮಂಗಳೂರು ಪೊಲೀಸ್ ಕಮೀಷನರ್‌ ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್ ನೀಡಿದೆ.

ಫೆ.14ರ ಒಳಗಡೆ ತನಿಖಾ ವರದಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ನೋಟೀಸ್ ನೀಡಲಾಗಿದೆ.

ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ದ ಲೋಕಯಕ್ತ ಕ್ಕೆ ದೂರು ದಾಖಲಾಗಿತ್ತು. ಸಾಮಾಜಿಕ ಕಾರ‍್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್, ಎಸ್.ಐ ಪ್ರದೀಪ್ ರಿಂದ ಭಾರೀ ಭ್ರಷ್ಟಾಚಾರ ,ಹಾಗೂ ಠಾಣೆಯಲ್ಲಿ ಹಣ ವಸೂಲು ಮಾಡಲು ಹಮೀದ್ ಎಂಬ ಬ್ರೋಕರ್ ಇಟ್ಟುಕೊಂಡಿದ್ದ ಆರೋಪ ಕೂಡ ದೂರಿನಲ್ಲಿದೆ.

ಗಾಂಜಾ ಮಾಫಿಯ, ಮರಳು ಮಾಫಿಯ, ಹೊಟೇಲ್ ಮಾಲೀಕರಿಂದ ಹಣಕ್ಕೆ ಬೇಡಿಕೆ ,ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಬಗ್ಗೆ ಹಾಗೂ ಚಿನ್ನದ ಅಂಗಡಿ ದರೋಡೆ ಕೇಸ್ ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ ಆರೋಪ ದೂರಿನಲ್ಲಿದೆ.

ಮಂಗಳೂರು ಕಮೀಷನರ್ ಶಶಿಕುಮಾರ್ ವಿರುದ್ದವೂ ಆರೋಪ
ಅಧಿಕಾರ ದುರುಪಯೋಗ ಮತ್ತು ಲಂಚದ ಆಪಾದನೆ ಇದ್ದುದರಿಂದ

ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟೀಸ್ ನೀಡಿದೆ.

2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ನೋಟೀಸ್ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular