Gujarat Assembly Elections: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮತ್ತು ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ 2022 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇಬ್ಬರೂ ಅದನ್ನು ಸ್ವತಃ ಘೋಷಿಸಿದ್ದಾರೆ. ರೂಪಾನಿ ಸರ್ಕಾರದ ಒಟ್ಟು 8 ಸಚಿವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಅಹಮದಾಬಾದ್(ನ.10): ಗುಜರಾತ್ ಚುನಾವಣೆಗೂ (Gujarat Elerctions) ಮುನ್ನ ರಾಜ್ಯದ ಮಾಜಿ ಸಿಎಂ ವಿಜಯ್ ರೂಪಾನಿ (Vijay Rupani) ಹಾಗೂ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ (Nitin Patel) ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಘೋಷಿಸಿದ್ದಾರೆ. ಇದೇ ವೇಳೆ ನಿತಿನ್ ಪಟೇಲ್ ಸಿಆರ್ ಪಾಟೀಲ್ (ಬಿಜೆಪಿ ರಾಜ್ಯಾಧ್ಯಕ್ಷ) ಅವರಿಗೆ ಪತ್ರ ಬರೆದಿದ್ದಾರೆ. ಅವರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ ಎನ್ನಲಾಗಿದೆ. ಇವರಿಬ್ಬರನ್ನು ಹೊರತುಪಡಿಸಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವ ಕೆಲವರ ಹೆಸರುಗಳೂ ಕೇಳಿ ಬಂದಿವೆ. ರೂಪಾನಿ ಸರ್ಕಾರದ ಒಟ್ಟು 8 ಸಚಿವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ವಿಜಯ್ ರೂಪಾನಿ ಸರ್ಕಾರದ ಸಂಪುಟದಲ್ಲಿ ಶಿಕ್ಷಣ ಮತ್ತು ಕಂದಾಯ ಸಚಿವರಾಗಿದ್ದ ಭೂಪೇಂದ್ರ ಸಿಂಗ್ ಚುಡಾಸಮಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದರೊಂದಿಗೆ ಗೃಹ ಖಾತೆ ರಾಜ್ಯ ಸಚಿವ ಪ್ರದೀಪ್ ಸಿಂಗ್ ಜಡೇಜಾ ಕೂಡ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬೊಟಾಡ್ ಶಾಸಕರಾಗಿರುವ ಇಂಧನ ಸಚಿವ ಸೌರಭ್ ಪಟೇಲ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಭಾವನಗರದ ಶಾಸಕ ಮತ್ತು ರೂಪಾನಿ ಸರ್ಕಾರದಲ್ಲಿ ಸಚಿವರಾಗಿರುವ ವಿಭಾವರಿ ಬೆನ್ ದವೆ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರೂಪಾನಿ ಸರ್ಕಾರದ ಸಚಿವರಾದ ಕೌಶಿಕ್ ಪಟೇಲ್, ವಲ್ಲಭ ಕಕಾಡಿಯಾ ಮತ್ತು ಯೋಗೇಶ್ ಪಟೇಲ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.