ಮಂಗಳೂರು : ಸುರತ್ಕಲ್ ಕಾಟಿಪಳ್ಳ ನಿವಾಸಿ ಅಬ್ದುಲ್ ಜಲೀಲ್ (43) ಎಂಬಾತನನ್ನು ಅಪರಿಚಿತ ವ್ಯಕ್ತಿಗಳು ಫ್ಯಾನ್ಸಿ ಸ್ಟೋರ್ ಬಳಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಬಂಧಿತರನ್ನು ಶೈಲೇಶ್ ಪೂಜಾರಿ, ಸವಿನ ಕಾಂಚನ್ ,ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ.
ಜಲೀಲ್ ಸ್ಥಳೀಯ ಹಿಂದು ಮಹಿಳೆ ಲೇಡಿ ಟೈಲರ್ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಕ್ಕೆ ಹತ್ಯೆ ಮಾಡಿದ್ದಾರೆಂದು ತನಿಖೆವೇಳೆ ಪೊಲೀಸರು ಮಾಹಿತಿ ಪಡೆದ್ದಿದ್ದಾರೆ.
“ತನಿಖೆಯ ಸಮಯದಲ್ಲಿ, ನಾವು ಮಹಿಳೆ ಸೇರಿದಂತೆ 12 ಜನರನ್ನು ಬಂಧಿಸಿದ್ದೇವೆ. ವಿಚಾರಣೆ ಬಳಿಕ ಮೂವರನ್ನು ಬಂಧಿಸಲಾಗಿದೆ. ಶೀಘ್ರದಲ್ಲೇ ಗುರುತಿನ ಪರೇಡ್ ನಡೆಸಲಾಗುವುದು,” ಎಂದರು.
ಏತನ್ಮಧ್ಯೆ, ಮಂಗಳೂರಿನ ಕೆಲವು ಭಾಗಗಳಲ್ಲಿ ಉದ್ವಿಗ್ನತೆ ಮುಂದುವರಿದಿದ್ದು, ಪೊಲೀಸರು ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಮಂಗಳೂರು ನಗರದ ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು.
ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳು. 2021ರಲ್ಲಿ ನಡೆದ ಕೊಲೆ ಯತ್ನದ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.