ಕಾರ್ಕಳ, : ಪ್ರವಾಸಕ್ಕೆಂದು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಪಲ್ಟಿಯಾದ ಘಟನೆ ಧರ್ಮಸ್ಥಳ-ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ಡಿ.2ರಂದು ನಡೆದಿದೆ.
ಪೊಲೀಸರ ಪ್ರಕಾರ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸ ಕಾರ್ಯಕ್ರಮಕ್ಕಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮೂವರು ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಖಾಸಗಿ ಬಸ್‌ನಲ್ಲಿ ಪ್ರವಾಸ ಆಯೋಜಿಸಲಾಗಿತ್ತು.ಬಸ್ ಉರುಳಲು ನಿಖರ ಕಾರಣ ಏನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.