
ಮಂಗಳೂರು : ಇಲ್ಲಿನ ನೆಹರೂ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವವನ್ನು ಜನವರಿ 26, ಗುರುವಾರ ದೇಶಭಕ್ತಿಯಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕನ್ನಡ, ಸಂಸ್ಕೃತಿ ಮತ್ತು ಇಂಧನ ಖಾತೆ ರಾಜ್ಯ ಸಚಿವ ಸುನೀಲ್ ಕುಮಾರ್ ಅವರು ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ವಂದನೆ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್, ಜಿಪಂ ಸಿಇಒ ಡಾ.ಕುಮಾರ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಎಸ್ಪಿ ರಿಷಿಕೇಶ್ ಭಗವಾನ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್, ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ ಸಿ ಹರೀಶ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.
ಉಡುಪಿಯಲ್ಲೂ ಗಣರಾಜ್ಯೋತ್ಸವವನ್ನು ಅತ್ಯಂತ ಹೆಮ್ಮೆ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು. ಮೀನುಗಾರಿಕೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಶಾಸಕ ರಘುಪತಿ ಭಟ್, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.