ಮಂಗಳೂರು : ಸಶಸ್ತ್ರ ಗಡಿ ಪಡೆ ಯೋಧನಾಗಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಕ್ತಿನಗರದ ನಿವಾಸಿ ಮುರಳೀಧರ ರೈ (37) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೋಮವಾರ ಬೆಳಗ್ಗೆ ನಿದ್ದೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಗಳವಾರ, ಜನವರಿ 24 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ವಿಮಾನ ನಿಲ್ದಾಣದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಮತ್ತು ಅಧಿಕಾರಿಗಳು ಕೂಡ ಯೋಧನಿಗೆ ಅಂತಿಮ ವಿದಾಯ ಹೇಳಿದರು. ನಂತರ ಅವರ ಪಾರ್ಥಿವ ಶರೀರವನ್ನು ಎಜೆ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.
ಯೋಧನ ನಿವಾಸದಲ್ಲಿ ಅಂತಿಮ ನಮನ ಮತ್ತು ವಿಧಿವಿಧಾನಗಳು ನಡೆಯಲಿವೆ.